ಆಕೆ ಜೊತೆ ರೊಮ್ಯಾನ್ಸ್ ಮಾಡಲಾರೆ, ಬೇರೆ ಹೀರೋಯಿನ್ ಇದ್ರೆ ನೋಡಿ: ಕರ್ನಾಟಕ ಮೂಲದ ನಟಿಯನ್ನು ತಿರಸ್ಕರಿಸಿದ ವಿಜಯ್ ಸೇತುಪತಿ!
ಕಾಲಿವುಡ್‌ನ ಸ್ಟಾರ್ ನಟ ವಿಜಯ್ ಸೇತುಪತಿ ಸದ್ಯ ಜವಾನ್ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಸೌತ್‌ನಲ್ಲಿ ಹವಾ ಸೃಷ್ಟಿಸಿಕೊಂಡಿದ್ದ ಈ ನಟನೀಗ ಉತ್ತರ ಭಾರತದ ಅಪಾರ ಅಭಿಮಾನಿಗಳನ್ನೂ ಸಂಪಾದಿಸಿದ್ದಾರೆ.

ಕಾಲಿವುಡ್‌ನ ಸ್ಟಾರ್ ನಟ ವಿಜಯ್ ಸೇತುಪತಿ ಸದ್ಯ ಜವಾನ್ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಸೌತ್‌ನಲ್ಲಿ ಹವಾ ಸೃಷ್ಟಿಸಿಕೊಂಡಿದ್ದ ಈ ನಟನೀಗ ಉತ್ತರ ಭಾರತದ ಅಪಾರ ಅಭಿಮಾನಿಗಳನ್ನೂ ಸಂಪಾದಿಸಿದ್ದಾರೆ.
ಹೀಗಿರುವಾಗಲೇ ಇದೇ ನಟ ತಮ್ಮ ಹೊಸ ಸಿನಿಮಾವೊಂದರ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ನನ್ನ ಸಿನಿಮಾಕ್ಕೆ ಆ ನಟಿ ಬೇಡ ಎಂದಿದ್ದಾರೆ. ನಟ ವಿಜಯ್ ಸೇತುಪತಿ, ಕರ್ನಾಟಕ ಮೂಲದ ನಟಿಯ ಜತೆಗೆ ರೊಮ್ಯಾನ್ಸ್ ಮಾಡುವುದು ಅಸಾಧ್ಯ ಎಂದಿದ್ದಾರೆ.
ಕೃತಿ ಶೆಟ್ಟಿ ತೆಲುಗಿನ ಉಪ್ಪೇನಾ ಚಿತ್ರದ ಮೂಲಕ ಟಾಲಿವುಡ್ಗೆ ಪದಾರ್ಪಣೆ ಮಾಡಿದರು. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಅವರು ನಾಯಕಿ ಕೃತಿ ಶೆಟ್ಟಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಕೃತಿಯ ನಟನೆಯನ್ನು ನೋಡಿ ಸೇತುಪತಿ ಮನಸಾರೆ ಹೊಗಳಿದ್ದರು. ಅಲ್ಲದೆ, ಕೃತಿಯೊಂದಿಗೆ ತಮಿಳು ಚಿತ್ರವೊಂದರಲ್ಲಿ ನಟಿಸಲು ನಿರಾಕರಿಸಿದ್ದಕ್ಕೆ ಕಾರಣ ನೀಡಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಇದು ಸೇತುಪತಿ ನಟನೆಯ “ಲಾಭಂ” ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಸಂದರ್ಶನವೊಂದರ ವಿಡಿಯೋ ತುಣುಕಾಗಿದೆ.
ವಿಡಿಯೋದಲ್ಲಿ ಮಾತನಾಡಿರುವ ಸೇತುಪತಿ, ನಾನು ಉಪ್ಪೇನಾ ಚಿತ್ರದಲ್ಲಿ ಕೃತಿಗೆ ತಂದೆಯಾಗಿ ಅಭಿನಯಿಸಿದ್ದೇನೆ ಎಂಬುದು ಚಿತ್ರತಂಡಕ್ಕೆ ಗೊತ್ತಿರಲಿಲ್ಲ. ನನ್ನ ಮಗಳೆಂದು ಭಾವಿಸಿದ ಮೇಲೆ ಅವಳೊಂದಿಗೆ ನಾನ್ಹೇಗೆ ರೊಮ್ಯಾನ್ಸ್ ಮಾಡಲು ಸಾಧ್ಯ ಎಂದು ಹೇಳಿದ್ದಾಗಿ ತಿಳಿಸಿದೆ. ಉಪ್ಪೇನಾ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ನನ್ನನ್ನು ನಿನ್ನ ತಂದೆಯಂದೇ ಭಾವಿಸು.
ನನ್ನ ಮಗನಿಗೆ ಸುಮಾರು 15 ವರ್ಷ. ಆತ ಕೃತಿಗಿಂತ ಸ್ವಲ ಚಿಕ್ಕವನು. ಕೃತಿಯನ್ನು ಕೂಡ ನಾನು ಮಗಳಂತೆ ಭಾವಿಸುತ್ತೇನೆ. ಆದ್ರೆ ತೆರೆಯ ಮೇಲೆ ನಾನು ಹೇಗೆ ಅವಳೊಂದಿಗೆ ರೊಮ್ಯಾನ್ಸ್ ಮಾಡಲು ಸಾಧ್ಯ. ಹೀಗಾಗಿ ಚಿತ್ರದ ನಾಯಕಿಯಾಗಿ ಅವಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೇನೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


