ಯಶ್ 19 ಚಿತ್ರಕ್ಕೆ ರಾಖಿ ಭಾಯ್ ಸಿದ್ಧತೆ: ನವೆಂಬರ್ ನಲ್ಲಿ ಸೆಟ್ಟೇರಲಿದೆ ಸಿನಿಮಾ!
ಕೆಜಿಎಫ್ 2 ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು...

ಕೆಜಿಎಫ್ 2 ಬಿಡುಗಡೆಯಾಗಿ ಬ್ಲಾಕ್ಬಸ್ಟರ್ ಹಿಟ್ ಆದ ನಂತರದ ದಿನಗಳಿಂದ ರಾಖಿಭಾಯ್ ಅಭಿಮಾನಿಗಳನ್ನು ಕಾಡುತ್ತಿರುವ ಏಕೈಕ ಪ್ರಶ್ನೆ ಅಂದ್ರೆ ಯಶ್ 19 ಸಿನಿಮಾ ಯಾವುದು? ಯಾರ ಜೊತೆ? ಚಿತ್ರಕಥೆ ಏನು? ನಾಯಕಿ ಯಾರು? ಎಂಬುದು. ಅಭಿಮಾನಿಗಳು ಸಾಕಷ್ಟು ಪ್ರಶ್ನೆಗಳನ್ನು ಮುಂದಿಟ್ಟರೂ ಯಶ್ ಮಾತ್ರ ಯಾವುದೇ ಸಿನಿಮಾವನ್ನೂ ಅನೌನ್ಸ್ ಮಾಡಿಲ್ಲ.
ಕಳೆದ ಒಂದು ವರ್ಷದಿಂದ ಯಶ್ 19 ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಲೇ ಇವೆ. ಇತ್ತೀಚೆಗಷ್ಟೇ ಗಣೇಶ ಚತುರ್ಥಿಗೆ ಯಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ಅನೌನ್ಸ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದು ಕೂಡ ಕೇವಲ ಊಹಾಪೋಹವಾಗಿ ಉಳಿದುಕೊಂಡಿದೆ.
ಈ ಮಧ್ಯೆ ಯಶ್ 19 ಬಗ್ಗೆ ಸೋಷಿಯಲ್ ಮೀಡಿಯಾದಲ್ಲೊಂದು ವಿಚಾರ ಸದ್ದು ಮಾಡುತ್ತಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
'ಲೈಯರ್ಸ್ ಡೈಸ್' ಚಿತ್ರಕ್ಕಾಗಿ ಎರಡು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿರುವ ಗೀತು ಅವರ ಸ್ಕ್ರಿಪ್ಟ್ಗೆ ಯಶ್ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಚಿತ್ರ ಬಹುತೇಕ ಕನ್ಫರ್ಮ್ ಆಗಿದೆ ಎಂಬುದು ಸದ್ಯದ ಮಾಹಿತಿ. ಚಿತ್ರದ ಕುರಿತು ಯಶ್ ಹಾಗೂ ಅವರ ತಂಡ ತೆರೆಮರೆಯಲ್ಲಿ ಕೆಲಸ ಮಾಡುತ್ತಿದೆ್ದು, ಬಹುಭಾಷೆಯಲ್ಲಿ ಈ ಚಿತ್ರ ತೆರೆಕಾಣಲಿದೆ ಎನ್ನಲಾಗುತ್ತಿದೆ.
ಪ್ರಸ್ತುತ ಯಶ್ ಹಾಗೂ ಅವರ ತಂಡ ಲಂಡನ್ ನಲ್ಲಿದ್ದು, ಹಾಲಿವುಡ್ನ ಖ್ಯಾತ ಸಾಹಸ ನಿರ್ದೇಶಕ ಹಾಗೂ ಮಾರ್ಷಲ್ ಆರ್ಟಿಸ್ಟ್ ಮತ್ತು ಹಾಲಿವುಡ್ ಆಕ್ಷನ್ ಸಿನಿಮಾಗಳ ನಿರ್ದೇಶಕ ಜೆಜೆ ಪೆರ್ರಿ ಅವರನ್ನು ಭೇಟಿಯಾಗಿದ್ದಾರೆ.
ಈ ಭೇಟಿಯ ಚಿತ್ರವನ್ನು ಸ್ವತಃ ಜೆಜೆ ಪೆರ್ರಿ ಅವರೇ ತನ್ನ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ‘ಸಹೋದರನ ಜೊತೆ ಲಂಡನ್ನಲ್ಲಿ’ ಎಂದು ಬರೆದುಕೊಂಡಿದ್ದಾರೆ.
ಲಂಡನ್ ಅಷ್ಟೇ ಅಲ್ಲದೆ ಯಶ್ ಪ್ರಿ-ಪ್ರೊಡಕ್ಷನ್ ಗಾಗಿ ಶ್ರಿಲಂಕಾಗೂ ಭೇಟಿ ನೀಡಿದ್ದಾರೆ. ಚಿತ್ರದ ಚಿತ್ರೀಕರಣ ನವೆಂಬರ್ ನಲ್ಲಿ ಪ್ರಾರಂಭವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


