ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್ ಕುಮಾರ್
ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

ಬೆಂಗಳೂರು: ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.
ಇಂದು ಕಾವೇರಿ ಪರ ಕನ್ನಡಿಗರ ಹೋರಾಟಕ್ಕೆ ಸ್ಯಾಂಡಲ್ ವುಡ್ ನಿಂದ ಬೆಂಬಲ ವ್ಯಕ್ತಪಡಿಸಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಾವು ಬಂದು ನಿಂತಿಕೊಳ್ತೀವಿ ಏನು ಆಗುತ್ತೆ ಹೇಳಿ? ನಾವು ಬಂದು ಮಾತನಾಡಿ ಹೋದರೇ ಸಮಸ್ಯೆ ಬಗೆಹರಿಯುತ್ತಾ? ಎಲ್ಲ ನಾಯಕರು ಕೂತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು. ಎಲ್ಲರೂ ರೈತರೇ, ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಸ್ನ ಹೊಡೆದು ಹಾಕಿದರೇ ಹೋರಾಟ ಆಗುತ್ತಾ ಎಂದು ಕೇಳಿದರು.
ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು. ನಮ್ಮ ಅನುಕೂಲಕ್ಕಾಗಿ ಪರಿಸ್ಥಿತಿ ಲಾಭ ಪಡೆದುಕೊಳ್ಳಬಾರದು ಎಂದು ವಾಣಿಜ್ಯ ಮಂಡಳಿ ಹೋರಾಟದಲ್ಲಿ ನಟ ಶಿವರಾಜ್ ಕುಮಾರ್ ಹೇಳಿದರು.
ಕಾವೇರಿ ನಮ್ಮ ಜೀವನಾಡಿ, ರೈತರ ಜೀವನಾಡಿ, ರೈತರ ಬಾಳು ಹಸನಾದರೆ ನಾವೆಲ್ಲರೂ ಬದುಕುತ್ತೇವೆ. ನಾಡು, ನುಡಿ, ನೆಲ ಮತ್ತು ಜಲ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರು ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತೇವೆ. ನಮ್ಮ ಬೆಂಬಲ ಸರ್ಕಾರಕ್ಕಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ರೈತರ ಹಿತ ಕಾಪಾಡಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


