ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾದ 'ಗಟ್ಟಿಮೇಳ' ನಟಿ ಗಗನ ಕುಂಚಿ
ಮಹಾದೇವಿ, ಮತ್ತು ಗಟ್ಟಿಮೇಳದಂತಹ ಧಾರಾವಾಹಿ ಮೂಲಕ ಗಮನ ಸೆಳೆದಿರುವ ನಟಿ ಗಗನ ಕುಂಚಿ ಇದೀಗ ಬೆಳ್ಳಿ ತೆರೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಮಹಾದೇವಿ, ಮತ್ತು ಗಟ್ಟಿಮೇಳದಂತಹ ಧಾರಾವಾಹಿ ಮೂಲಕ ಗಮನ ಸೆಳೆದಿರುವ ನಟಿ ಗಗನ ಕುಂಚಿ ಇದೀಗ ಬೆಳ್ಳಿ ತೆರೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
ಎರಡು ಚಿತ್ರಗಳಲ್ಲಿ ಗಗನ ಕುಂಚಿ ನಾಯಕಿಯಾಗಿ ಅಭಿನಯಿಸುತ್ತಿದ್ದು, ಎರಡೂ ಚಿತ್ರಗಳು ಶೀಘ್ರದಲ್ಲೇ ಸೆಟ್ಟೇರಲಿದೆ.
ಗಗನ ಕುಂಚಿ ನಾಯಕಿಯಾಗಿ ನಟಿಸುತ್ತಿರುವ ಎರಡು ಚಿತ್ರಗಳು ಸಹ ಸುಗಮ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ. ವಾಲ್ಟರ್ ವೀರಯ್ಯ ಮತ್ತು ವೆಂಕಿಮಾಮ ಚಿತ್ರಗಳನ್ನು ನಿರ್ದೇಶಿಸಿರುವ ಗುರುಕುಮಾರ್ ಪಿ ಅವರು ಒಂದು ಚಿತ್ರವನ್ನು ನಿರ್ದೇಶಿಸುತ್ತಿದ್ದರೆ, ಎರಡನೇ ಚಿತ್ರವನ್ನು ವಿಜಯ್ ಆರ್ ಅವರು ನಿರ್ದೇಶಿಸುತ್ತಿದ್ದಾರೆ.
ಎರಡೂ ಚಿತ್ರಗಳ ನಿರ್ಮಾಪಕರು ತಮ್ಮ ಚಿತ್ರಗಳನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದಾರೆ.
ಇದನ್ನೂ ಓದಿ: ನಟ ಪ್ರಭಾಸ್ ನಟನೆ 'ಸಲಾರ್' ರಿಲೀಸ್ ಡೇಟ್ ಫಿಕ್ಸ್!
ಈ ಕುರಿತು ಮಾತನಾಡಿರುವ ಗಗನ ಅವರು, ಈ ಹಿಂದೆ ಕೆಲವು ಅವಕಾಶಗಳು ಬಂದಿದ್ದವು. ಆದರೆ, ಕಥೆ ಮತ್ತು ಪಾತ್ರಗಳು ನನಗೆ ತೃಪ್ತಿ ತಂದಿರಲಿಲ್ಲ. ಹೀಗಾಗಿ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಈ ಎರಡೂ ಚಿತ್ರಗಳು ನನ್ನ ಪ್ರತಿಭೆಗೆ ಅವಕಾಶ ನೀಡುತ್ತಿದೆ. ನಟಿಯಾಗಿ ವೈವಿಧ್ಯಮಯ ಪಾತ್ರಗಳ ಮಾಡಲು ಇಷ್ಟ ಪಡುತ್ತೇನೆ. ನಾಯಕ ನಟಿಯಾಗುವ ನನ್ನ ಕನಸು ಇದೀಗ ನನಸಾಗುತ್ತಿದೆ ಎಂದು ಹೇಳಿದ್ದಾರೆ.
ಈಗಾಗಲೇ ಕಿರುತೆರೆಯಲ್ಲಿ ಜನರು ನನ್ನ ಅಭಿನಯವನ್ನು ಮೆಚ್ಚಿದ್ದಾರೆ. ಅವರ ಮೆಚ್ಚುಗೆ ನನಗೆ ಸಂತಸ ತಂದಿದೆ. ಇದೀಗ ಬೆಳ್ಳಿತೆರೆಯಲ್ಲಿನ ನನ್ನ ಪ್ರಯಾಣಕ್ಕೂ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


