ಪವನ್ ಕಲ್ಯಾಣ್ ಸಂಸಾರದಲ್ಲಿ ಬಿರುಕು: ಮೂರನೇ ಪತ್ನಿಯಿಂದಲೂ ದೂರ; ಮೆಗಾ ಕುಟುಂಬದಲ್ಲಿ ವಿಚ್ಛೇದನಗಳ ಸರಮಾಲೆ!
ಟಾಲಿವುಡ್ ನಟ ಪವನ್ ಕಲ್ಯಾಣ್ ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ.

ಟಾಲಿವುಡ್ ನಟ ಪವನ್ ಕಲ್ಯಾಣ್ ಮೂರನೇ ಮದುವೆಯೂ ಮುರಿದುಬಿತ್ತಾ? ಹೀಗೊಂದು ಅನುಮಾನ ಕಾಡುತ್ತಿದೆ. ಟಾಲಿವುಡ್ ಸ್ಟಾರ್ ಪವನ್ ಈಗಾಗಲೇ ಎರಡು ಮದುವೆಗಳನ್ನು ಮುರಿದುಕೊಂಡಿದ್ದು, ಮೂರನೇ ಮದುವೆ ಆಗಿದ್ದು ಎಲ್ಲರಿಗೂ ಗೊತ್ತಿದೆ.
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಇತ್ತೀಚಿನ ದಿನಗಳಲ್ಲಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ತೆರದಿದ್ದಾರೆ. ತನ್ನ ಮೆಚ್ಚಿನ ನಟ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿರುವುದನ್ನು ಅಭಿಮಾನಿಗಳು ಟ್ವಿಟರ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಈ ನಡುವೆ ಅವರ ಸಂಸಾರಿಕ ಜೀವನದ ಬಗ್ಗೆಯೂ ಕಳೆದ ಕೆಲ ದಿನಗಳಿಂದ ಸುದ್ದಿಯಾಗುತ್ತಿದೆ.
ಪತ್ನಿ ಅನ್ನಾ ಲಿಜ್ನೋವಾ ಅವರು ಪವನ್ ಕಲ್ಯಾಣ್ ರಿಂದ ದೂರವಾಗಿದ್ದರೆ ಎನ್ನುವ ಕೆಲ ಗಾಸಿಪ್ ಗಳು ಟಾಲಿವುಡ್ ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಪವನ್ ಕಲ್ಯಾಣ್ ರೊಂದಿಗೆ ಅವರು ಕಳೆದ ಕೆಲ ಸಮಯದಿಂದ ಜೊತೆಯಾಗಿ ಕಾಣಿಸಿಕೊಳ್ಳದೇ ಇರುವುದು ಎನ್ನಲಾಗಿದೆ.
ಪವನ್ ರೊಂದಿಗೆ ಸಾರ್ವಜನಿಕ ಸಮಾರಂಭ, ಕುಟುಂಬದ ಸಮಾರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪತ್ನಿ ಅನ್ನಾ ಕಳೆದ ಕೆಲ ಸಮಯದಿಂದ ಎಲ್ಲೂ ಕೂಡ ಜೊತೆಯಾಗಿ ಕಾಣಿಸಿಕೊಂಡಿಲ್ಲ. ಪ್ರಮುಖವಾಗಿ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲೂ ಅವರು ಕಂಡಿಲ್ಲ.
ಈ ಎಲ್ಲಾ ಕಾರಣದಿಂದ ಪವನ್ ಕಲ್ಯಾಣ್ – ಅನ್ನಾ ಲಿಜ್ನೋವಾ ಅವರ ಸಂಬಂಧದಲ್ಲಿ ಬಿರುಕು ಉಂಟಾಗಿದೆ. ಅವರು ವಿಚ್ಛೇದನ ಮುಂದಾಗಿದ್ದಾರೆ ಎನ್ನುವ ವದಂತಿಗಳು ಹಬ್ಬಿವೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವ ಮಾಹಿತಿಯೂ ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


