ನಟ ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ 'ಗಣ' ಸಿನಿಮಾದ ಟೀಸರ್ ಬಿಡುಗಡೆ!
ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮವೊಂದರಲ್ಲಿ ಗಣ ಚಿತ್ರತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಈ ಮೊದಲು '1: ನೇನೊಕ್ಕಡಿನೆ' ಮತ್ತು '100% ಲವ್'ನಂತಹ ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ, ಭೌತಶಾಸ್ತ್ರದ ಶಿಕ್ಷಕರಿಂದ ನಿರ್ದೇಶಕರಾಗಿ ಬಡ್ತಿ ಪಡೆದಿರುವ ಬರಹಗಾರ ಹರಿಪ್ರಸಾದ್ ಜಕ್ಕಾ ಅವರ ಮೊದಲ ಕನ್ನಡ ಸಿನಿಮಾವಾಗಿದೆ.

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮವೊಂದರಲ್ಲಿ ಗಣ ಚಿತ್ರತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಈ ಮೊದಲು '1: ನೇನೊಕ್ಕಡಿನೆ' ಮತ್ತು '100% ಲವ್'ನಂತಹ ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ, ಭೌತಶಾಸ್ತ್ರದ ಶಿಕ್ಷಕರಿಂದ ನಿರ್ದೇಶಕರಾಗಿ ಬಡ್ತಿ ಪಡೆದಿರುವ ಬರಹಗಾರ ಹರಿಪ್ರಸಾದ್ ಜಕ್ಕಾ ಅವರ ಮೊದಲ ಕನ್ನಡ ಸಿನಿಮಾವಾಗಿದೆ.
'ಚಿತ್ರವು 1993 ಮತ್ತು 2022ರ ಹಿನ್ನೆಲೆಯಲ್ಲಿ ನಡೆಯುವ ಕಥೆಯಾಗಿದೆ. ವಾಸ್ತವವಾಗಿ, ಗಣ ಸಿನಿಮಾವನ್ನು ಸಮಯದ ವಿರುದ್ಧ ಹೋರಾಡುವ ಚಿತ್ರವೆಂದು ಪರಿಗಣಿಸಬಹುದು' ಎಂದು ನಿರ್ದೇಶಕರು ವಿವರಿಸುತ್ತಾರೆ.
ಚೆರ್ರಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪಾರ್ಥು ನಿರ್ಮಿಸಿದ ಗಣ ಸಿನಿಮಾದ ಮೂಲಕ ಬಹುಭಾಷಾ ನಟಿ ವೇದಿಕಾ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ಚಿತ್ರದಲ್ಲಿ ಯಶಾ ಶಿವಕುಮಾರ್ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರದ ತಾರಾಗಣದಲ್ಲಿ ನಟಿ ಕೃಷಿ ತಾಪಂಡ, ಶಿವರಾಜ್ ಕೆಆರ್ ಪೇಟೆ, ಮಾಸ್ಟರ್ ರಘುನಂದನ್ ಕೂಡ ಇದ್ದಾರೆ.
ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಮತ್ತು ಜೈ ಆನಂದ್ ಅವರ ಛಾಯಾಗ್ರಹಣದೊಂದಿಗೆ ಗಣ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಮತ್ತು ಶೀಘ್ರದಲ್ಲೇ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಿಸಲು ಚಿತ್ರತಂಡ ಯೋಜಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


