ಸಿನಿಮಾ ಸುದ್ದಿ

ನವೀನ್ ಶಂಕರ್, ಅರ್ಚನಾ ಜೋಯಿಸ್ ಅಭಿನಯದ 'ಕ್ಷೇತ್ರಪತಿ' ಬಿಡುಗಡೆಗೆ ದಿನಾಂಕ ಫಿಕ್ಸ್

ನವೀನ್ ಶಂಕರ್ ಮತ್ತು ಅರ್ಚನಾ ಜೋಯಿಸ್ ಅಭಿನಯದ ಶ್ರೀಕಾಂತ್ ಕಟಗಿ ನಿರ್ದೇಶನದ ಕ್ಷೇತ್ರಪತಿ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಚಿತ್ರವು ಆಗಸ್ಟ್ 18 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ನವೀನ್ ಶಂಕರ್, ಅರ್ಚನಾ ಜೋಯಿಸ್ ಅಭಿನಯದ 'ಕ್ಷೇತ್ರಪತಿ' ಬಿಡುಗಡೆಗೆ ದಿನಾಂಕ ಫಿಕ್ಸ್
ಕ್ಷೇತ್ರಪತಿ ಚಿತ್ರದ ಪೋಸ್ಟರ್
Published On :

ನವೀನ್ ಶಂಕರ್ ಮತ್ತು ಅರ್ಚನಾ ಜೋಯಿಸ್ ಅಭಿನಯದ ಶ್ರೀಕಾಂತ್ ಕಟಗಿ ನಿರ್ದೇಶನದ ಕ್ಷೇತ್ರಪತಿ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಚಿತ್ರವು ಆಗಸ್ಟ್ 18 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಉತ್ತರ ಕರ್ನಾಟಕದಲ್ಲಿ ನಡೆಯುವ ರೈತ ಹೋರಾಟವನ್ನು ಚಿತ್ರ ಒಳಗೊಂಡಿದ್ದು, ಕುತೂಹಲಕಾರಿ ನಿರೂಪಣೆಯ ಒಂದು ಲುಕ್ ಅನ್ನು ನೀಡುವ ಮೂಲಕ ಚಿತ್ರದಲ್ಲಿ ನಾಯಕ-ನಾಯಕಿಯ ಪಾತ್ರಗಳ ಹೆಸರನ್ನು ಬಹಿರಂಗಪಡಿಸುವ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. 

‘ಗುಲ್ಟು’, ‘ಹೊಂದಿಸಿ ಬರೆಯಿರಿ’, ‘ಧರಣಿ ಮಂಡಲ ಮಧ್ಯದೊಳಗೆ’, ‘ಗುರುದೇವ್ ಹೊಯ್ಸಳ’ ಸಿನಿಮಾಗಳ ಮೂಲಕ ಮನ್ನಣೆ ಪಡೆದಿರುವ ನಟ ನವೀನ್ ಶಂಕರ್ ಅವರ ‘ಕ್ಷೇತ್ರಪತಿ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ‌. ‘ಬಸವ’ ಹೆಸರಿನ ಎಂಜಿನಿಯರ್ ಪಾತ್ರದಲ್ಲಿ ನವೀನ್ ಶಂಕರ್, ಅರ್ಚನಾ ಜೋಯಿಸ್ ಹೊಸ ತಲೆಮಾರಿನ ಪತ್ರಕರ್ತೆ ಭೂಮಿಕಾ ಪಾತ್ರಕ್ಕೆ ಜೀವ ತುಂಬಿದ್ದಾರೆ.

ಹೊಂದಿಸಿ ಬರೆಯಿರಿ ಚಿತ್ರದಲ್ಲಿನ ತಮ್ಮ ಅಭಿನಯದ ಮೂಲಕ ಮೋಡಿ ಮಾಡಿದ್ದ ನವೀನ್ ಶಂಕರ್ ಮತ್ತು ಅರ್ಚನಾ ಜೋಯಿಸ್ ಜೋಡಿ ಕ್ಷೇತ್ರಪತಿಯಲ್ಲಿ ಮತ್ತೆ ಒಂದಾಗುತ್ತಾರೆ. ಚಿತ್ರದ ಟೀಸರ್ ಈಗಾಗಲೇ ಅದರ ಬಲವಾದ ನಿರೂಪಣೆ ಮತ್ತು ದೃಶ್ಯಗಳಿಗಾಗಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದು, ವೈಬಿವಿ ಶಿವ ಸಾಗರ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.