'ಅಮೃತವರ್ಷಿಣಿ' ಸಿನಿಮಾ ಖ್ಯಾತಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ಕನ್ನಡದ ಅಮೃತ ವರ್ಷಿಣಿ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು ಅವರ ಆರೋಗ್ಯ ಚಿಂತಾಜನಕವಾಗಿದ್ದು ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕನ್ನಡದ ಅಮೃತ ವರ್ಷಿಣಿ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ನಟ ಶರತ್ ಬಾಬು ಅವರ ಆರೋಗ್ಯ ಚಿಂತಾಜನಕವಾಗಿದ್ದು ಸದ್ಯ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ʻಅಮೃತವರ್ಷಿಣಿ' ಚಿತ್ರದಲ್ಲಿ ರಮೇಶ್ ಅರವಿಂದ್, ಸುಹಾಸಿನಿ ಜೊತೆ ಶರತ್ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 71 ವರ್ಷ ವಯಸ್ಸಿನ ಶರತ್ ಬಾಬು ಅವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಹಿನ್ನಲೆಯಲ್ಲಿ ಬುಧವಾರ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕನ್ನಡ ಮಾತ್ರವಲ್ಲದೆ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶರತ್ ಬಾಬು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಯಾವ ಕಾಯಿಲೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹೊರಬಂದಿಲ್ಲ. ಶರತ್ ಬಾಬು ಅವರನ್ನು ನೋಡಲು ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
1951 ರಲ್ಲಿ ಆಂಧ್ರ ಪ್ರದೇಶದಲ್ಲಿ ಜನಿಸಿದ ಇವರು 1973 ರಲ್ಲಿ ತೆರೆಕಂಡ `ರಾಮರಾಜ್ಯಂ’ ತೆಲುಗು ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.
ಇವರ ಮೂಲ ಹೆಸರು ಸತ್ಯಂ ಬಾಬು ದೀಕ್ಷಿತಲು. ನಾಯಕನಾಗಿ ಮತ್ತು ಪೋಷಕನಟನಾಗಿ ಸಾಕಷ್ಟು ಮನ್ನಣೆ ಪಡೆದಿದ್ದಾರೆ. ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ವಿಚ್ಛೇದನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


