ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ

ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ.

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ
ಶಿವರಾಜ್ ಕೆ.ಆರ್ ಪೇಟೆ ತಂದೆ
Published On :

ಬೆಂಗಳೂರು: ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ  ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾದರು. ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮದ ನಿವಾಸಿಯಾಗಿದ್ದರು.

ಡ್ರಾಮಾ ಮಾಸ್ಟರ್ ರಾಮೇಗೌಡ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೇಗೌಡ ಅವರು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ನಾಲ್ಕು ಗಂಡು ಮಕ್ಕಳು ಮೂರು ಹೆಣ್ಣುಮಕ್ಕಳು ಇದ್ದಾರೆ.  ಹುಟ್ಟೂರು ಕೆ.ಆರ್‌. ಪೇಟೆ ತಾಲೂಕಿನ ರಾಜಘಟ್ಟದಲ್ಲಿ ಸೆ. 1ರ ಶುಕ್ರವಾರ ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.

ರಾಮೇಗೌಡರು ಡ್ರಾಮಾ ಮಾಸ್ಟರ್‌ ಆಗಿ ಕಳೆದ ಕೆಲ ದಶಕಗಳಿಂದ ಗುರುತಿಸಿಕೊಂಡಿದ್ದರು. ನಾಟಕ ನಿರ್ದೇಶನದಲ್ಲಿಯೂ ತೊಡಗಿಸಿಕೊಂಡು, ಅಪಾರ ಶಿಷ್ಯವೃಂದವನ್ನೂ ಹೊಂದಿದ್ದರು. ಅಪ್ಪನ ಗರಡಿಯಲ್ಲಿಯೇ ‌ಶಿವರಾಜ್‌ ಕೆ.ಆರ್‌. ಪೇಟೆ ನಟನೆಯನ್ನು ಕರಗತ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.