ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿಯನದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಕ್ಕೆ ಉದಯನಿಧಿ ಸ್ಟಾಲಿನ್ ಮೆಚ್ಚುಗೆ

ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿಯನದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಕ್ಕೆ ಉದಯನಿಧಿ ಸ್ಟಾಲಿನ್ ಮೆಚ್ಚುಗೆ
ಉದಯನಿಧಿ ಸ್ಟಾಲಿನ್ - ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಸ್ಟಿಲ್
Published On :

ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸಹೋದರ ರಕ್ಷಿತ್ ಶೆಟ್ಟಿ! ನಿಮ್ಮ ಇತ್ತೀಚಿನ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ತುಂಬಾ ಚೆನ್ನಾಗಿದೆ! ಅತ್ಯುತ್ತಮ ಚಲನಚಿತ್ರ ನಿರ್ಮಾಣ! ಇಡೀ ತಂಡಕ್ಕೆ ಅಭಿನಂದನೆಗಳು! ಮುಂದಿನ ಭಾಗಕ್ಕಾಗಿ ಕಾಯುತ್ತಿದ್ದೇನೆ' ಎಂದು ಬರೆದಿದ್ದಾರೆ.  

ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತ ಸಾಗರದಾಚೆ ಎಲ್ಲೋ ಎರಡು ಭಾಗಗಳಲ್ಲಿ ತಯಾರಾಗಿದೆ. ಎರಡನೇ ಭಾಗವು ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ರಕ್ಷಿತ್ ಶೆಟ್ಟಿ ಹೊರತುಪಡಿಸಿ, ಚಿತ್ರದಲ್ಲಿ ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಉಧಯನಿಧಿ ಸ್ಟಾಲಿನ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಹೇಮಂತ್ ರಾವ್, ಧನ್ಯವಾದಗಳು ಸರ್ ಎಂದಿದ್ದಾರೆ.

ಚಿತ್ರವು ಸೆಪ್ಟೆಂಬರ್ 1 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ಹಲವರು ಈಗಾಗಲೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.