ಸಿನಿಮಾ ಸುದ್ದಿ

ರಿಷಬ್ ಶೆಟ್ಟಿ ನಿರ್ಮಾಣದ 'ಲಾಫಿಂಗ್ ಬುದ್ಧ' ಚಿತ್ರೀಕರಣ ಪೂರ್ಣ; ಜುಲೈನಲ್ಲಿ ಚಿತ್ರ ಬಿಡುಗಡೆಗೆ ಸಿದ್ಧತೆ

ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದ 'ಲಾಫಿಂಗ್ ಬುದ್ಧ' ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಭರತ್ ರಾಜ್ ನಿರ್ದೇಶನದ ಈ ಚಿತ್ರ ಪೊಲೀಸ್ ಅಧಿಕಾರಿಗಳ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೋಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ಮಾಣದ 'ಲಾಫಿಂಗ್ ಬುದ್ಧ' ಚಿತ್ರೀಕರಣ ಪೂರ್ಣ; ಜುಲೈನಲ್ಲಿ ಚಿತ್ರ ಬಿಡುಗಡೆಗೆ ಸಿದ್ಧತೆ
ಲಾಫಿಂಗ್ ಬುದ್ಧ ಚಿತ್ರದ ಸ್ಟಿಲ್
Published On :

ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದ 'ಲಾಫಿಂಗ್ ಬುದ್ಧ' ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಭರತ್ ರಾಜ್ ನಿರ್ದೇಶನದ ಈ ಚಿತ್ರ ಪೊಲೀಸ್ ಅಧಿಕಾರಿಗಳ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೋಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ ರಿಷಬ್ ಶೆಟ್ಟಿ ಸೇರಿದಂತೆ ಚಿತ್ರತಂಡವು ಪೊಲೀಸ್ ಧ್ವಜ ದಿನದ ಸಂದರ್ಭದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿತು. ತಮ್ಮ ಧೈರ್ಯ ಮತ್ತು ಸ್ಥೈರ್ಯವನ್ನು ಪ್ರತಿಬಿಂಬಿಸುವ ಕೆಚ್ಚೆದೆಯ ಮತ್ತು ಧೀರ ಅಧಿಕಾರಿಗಳಿಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ಮಾಪಕರಾಗಿ ಚಿತ್ರದ ಕುರಿತು ಮಾತನಾಡುವ ರಿಷಬ್ ಶೆಟ್ಟಿ, ಲಾಫಿಂಗ್ ಬುದ್ಧ ತಾವು ಬೆಂಬಲಿಸಿದ ಅತ್ಯುತ್ತಮ ವಿಷಯವಾಗಿದೆ. 'ಪ್ರತಿಯೊಂದು ಕ್ಷೇತ್ರವೂ ತನ್ನದೇ ಆದ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ಹೊಂದಿದೆ. ನಮ್ಮಲ್ಲಿ ಸಾಮಾನ್ಯವಾಗಿ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುವ ಸಿನಿಮಾಗಳು ಬಂದಿದ್ದರೂ, ಹೆಚ್ಚಾಗಿ ಅವರ ವೃತ್ತಿಪರ ಜೀವನದ ಮೇಲೆ ಕೇಂದ್ರೀಕರಿಸಲಾಗುತ್ತದೆ. ಅವರ ತಮ್ಮ ವೈಯಕ್ತಿಕ ಜೀವನದ ಕುರಿತು ವಿರಳವಾಗಿರುತ್ತದೆ' ಎನ್ನುತ್ತಾರೆ.

ನಿರ್ದೇಶಕ ಭರತ್ ರಾಜ್ ಅವರು ಹೆಚ್ಚಿನ ಅಂಶವನ್ನು ಅನ್ವೇಷಿಸಿದ್ದಾರೆ ಮತ್ತು ಅವರ ವೃತ್ತಿಪರ ಜೀವನದ ಒಂದು ನೋಟವನ್ನು ಲಘು ಹಾಸ್ಯದ ಮೂಲಕ ನೀಡಿದ್ದಾರೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ನಟಿಸಿದ್ದು, ಚಿತ್ರದಲ್ಲಿ ಉತ್ತಮ ಕಲಾವಿದರಿದ್ದಾರೆ. ನಾನು ಸಿನಿಮಾ ನೋಡಿದ್ದೇನೆ ಮತ್ತು ಅದು ಚೆನ್ನಾಗಿ ಮೂಡಿಬಂದಿದೆ. ಜುಲೈನಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದ್ದು, ವಿಧಾನಸಭೆ ಚುನಾವಣೆಯ ನಂತರ ಅದರ ಬಿಡುಗಡೆಗಾಗಿ ನಾನು ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ರಿಷಬ್ ಶೆಟ್ಟಿ.

ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ಕೆಲಸ ಮಾಡುವ ಮೂಲಕ ಹೆಸರುವಾಸಿಯಾಗಿರುವ ಸಂಗೀತ ನಿರ್ದೇಶಕ ವಿಷ್ಣು ವಿಜಯ್ ಅವರು ಲಾಫಿಂಗ್ ಬುದ್ಧ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಚಂದ್ರಶೇಖರನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಸಂಕಲನವನ್ನು ಕೆಎಂ ಪ್ರಕಾಶ್ ವಹಿಸಿಕೊಂಡಿದ್ದಾರೆ. ಚಿತ್ರದಲ್ಲಿ ತೇಜು ಬೆಳವಾಡಿ ಮತ್ತು ಸುಂದರ್ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.