ಸಿನಿಮಾ ಸುದ್ದಿ

30 ವರ್ಷಗಳ ನಂತರ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಅಮೀರ್ ಖಾನ್, ರಜನಿಕಾಂತ್!

30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ ಕೂಲಿ ಚಿತ್ರಕ್ಕಾಗಿ ಒಂದಾಗ್ತಿದ್ದಾರೆ ಎಂಬ ಸುದ್ದಿ ಹೊರ ಬಂದಿದೆ. 1995ರಲ್ಲಿ ‘ಆತಂಕ್ ಹಿ ಆತಂಕ್’ ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಜೊತೆಯಾಗಿ ನಟಿಸಿದ್ದರು.

30 ವರ್ಷಗಳ ನಂತರ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಅಮೀರ್ ಖಾನ್, ರಜನಿಕಾಂತ್!
ಅಮೀರ್ ಖಾನ್ ಮತ್ತು ರಜನಿಕಾಂತ್ (ಸಂಗ್ರಹ ಚಿತ್ರ)
Published On :

ಬಹುನಿರೀಕ್ಷಿತ ‘ಕೂಲಿ’ ಸಿನಿಮಾ ಬಗ್ಗೆ ದಿನದಿಂದ ದಿನಕ್ಕೆ ಹೊಸ ಮಾಹಿತಿಗಳು ಹೊರಬರುತ್ತಿವೆ. ರಜನಿಕಾಂತ್ ಜೊತೆ ಉಪೇಂದ್ರ ನಟಿಸುವ ಬಗ್ಗೆ ಅಫಿಷಿಯಲ್ ಅನೌನ್ಸ್‌ಮೆಂಟ್‌ ಸಿಕ್ಕ ಬೆನ್ನಲ್ಲೇ ಈಗ ಮತ್ತೊಂದು ಕ್ರೆಜಿ ಅಪ್‌ಡೇಟ್ ಹೊರಬಿದ್ದಿದೆ.

30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ ಕೂಲಿ ಚಿತ್ರಕ್ಕಾಗಿ ಒಂದಾಗ್ತಿದ್ದಾರೆ ಎಂಬ ಸುದ್ದಿ ಹೊರ ಬಂದಿದೆ. 1995ರಲ್ಲಿ ‘ಆತಂಕ್ ಹಿ ಆತಂಕ್’ ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಜೊತೆಯಾಗಿ ನಟಿಸಿದ್ದರು. ಈಗ ಹೊಸ ಪ್ರಾಜೆಕ್ಟ್ ಕೂಲಿ ಚಿತ್ರಕ್ಕಾಗಿ ತಲೈವಾ ಜೊತೆ ಬಾಲಿವುಡ್ ನಟ ಆಮೀರ್ ಖಾನ್ ಸ್ಪೆಷಲ್ ರೋಲ್‌ನಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಸಿನಿಮಾ ತಂಡ ಅಧಿಕೃತ ಮಾಹಿತಿ ನೀಡಬೇಕಾಗಿದೆ. ಆದರೆ ಆಮೀರ್ ಖಾನ್‌ರನ್ನು ಡೈರೆಕ್ಟರ್ ಲೋಕೇಶ್ ಕನಕರಾಜ್ ಟೀಮ್ ಸಂಪರ್ಕಿಸಿದೆ ಎನ್ನಲಾಗಿದೆ.

ಆಮೀರ್ ಖಾನ್‌ ಈ ಒಂದು ಚಿತ್ರದಲ್ಲಿ ಯಾವ ರೀತಿ ರೋಲ್ ಮಾಡ್ತಾರೆ ಅನ್ನೋ ಪ್ರಶ್ನೆ ಇದೆ. ಆದರೆ, ಸದ್ಯದ ವೈರಲ್ ಸುದ್ದಿಯ ಪ್ರಕಾರ ಆಮೀರ್ ಖಾನ್ ಈ ಚಿತ್ರದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದಾರೆ. ಇಡೀ ಚಿತ್ರದಲ್ಲಿ ಇರದೇ ಇದ್ರೂ ಕೂಡ ಆಮೀರ್ ಖಾನ್ ಇಲ್ಲಿ ಮಹತ್ವದ ರೋಲ್ ಮಾಡುತ್ತಿದ್ದಾರೆ ಅನ್ನುವ ಸುದ್ದಿ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.