ಯೋಗರಾಜ್ ಭಟ್ ಮುಂದಿನ ಸಿನಿಮಾ ‘ಮನದ ಕಡಲು’: 18 ವರ್ಷಗಳ ಬಳಿಕ ಒಂದಾದ ಮುಂಗಾರು ಮಳೆ ಟೀಂ
2006ರಲ್ಲಿ ಯೋಗರಾಜ್ ಭಟ್ ನಿರ್ದೇಶಿಸಿದ್ದ ಮುಂಗಾರು ಮಳೆ ಸ್ಯಾಂಡಲ್ವುಡ್'ನಲ್ಲಿ ದಾಖಲೆಯನ್ನೇ ಸೃಷ್ಟಿಸಿತ್ತು.

‘ಮುಂಗಾರು ಮಳೆ’ ಸಿನಿಮಾದ 18 ವರ್ಷಗಳ ನಂತರ ಯೋಗರಾಜ್ ಭಟ್ ಮತ್ತು ಇ. ಕೃಷ್ಣಪ್ಪ ಮತ್ತೆ ಒಂದಾಗಿದ್ದು, ಹೊಸ ಸಿನಿಮಾಕ್ಕೆ ‘ಮನದ ಕಡಲು’ ಎಂದು ಹೆಸರಿಡಲಾಗಿದೆ.
2006ರಲ್ಲಿ ಯೋಗರಾಜ್ ಭಟ್ ನಿರ್ದೇಶಿಸಿದ್ದ ಮುಂಗಾರು ಮಳೆ ಸ್ಯಾಂಡಲ್ವುಡ್'ನಲ್ಲಿ ದಾಖಲೆಯನ್ನೇ ಸೃಷ್ಟಿಸಿತ್ತು. 18 ವರ್ಷಗಳ ಬಳಿಕ ಯೋಗರಾಜ್ ಭಟ್ ಮತ್ತು ಇ. ಕೃಷ್ಣಪ್ಪ ಮತ್ತೆ ಕೈಜೊಡಿಸಿದ್ದು, ಮನದ ಕಡಲು ಚಿತ್ರವನ್ನು ಹೊರತರುತ್ತಿದ್ದಾರೆ.
ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು, ದತ್ತಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, 2025 ರ ಮೊದಲಾರ್ಧದಲ್ಲಿ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ,
ಮನದ ಕಡಲು ಇಕೆ ಎಂಟರ್ಟೈನರ್ಸ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದ್ದು, ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ, ಹಾಡುಗಳಿಗೆ ಜಯಂತ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



