ಕರ್ನಾಟಕದಲ್ಲಿ ಪುಷ್ಪಾ 2 ಓಟಕ್ಕೆ ಲಗಾಮು: ಮಧ್ಯರಾತ್ರಿ ಶೋಗಳು ದಿಢೀರ್ ರದ್ದು!
ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಅಭಿಮಾನಿಗಳಿಗಾಗಿ ದಿನಾಂಕ 5ನೇ ತಾರೀಕಿನ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ.

ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಅಭಿಮಾನಿಗಳಿಗಾಗಿ ದಿನಾಂಕ 5ನೇ ತಾರೀಕಿನ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ.
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ರಾಜ್ಯದಲ್ಲಿ ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ, ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ ಎಂಬ ಸರ್ಕಾರದ ಆದೇಶವಿದ್ದರೂ ಸಹ ಕರ್ನಾಟಕದ ಕೆಲ ಚಿತ್ರಮಂದಿರಗಳಲ್ಲಿ ಅವದಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ.
ದಯಮಾಡಿ ಯಾವ ಚಿತ್ರಮಂದಿರಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿದೆಯೋ ಅಂತಹ ಚಿತ್ರಮಂದಿರಗಳ ವಿರುದ್ದ ಹಾಗೆಯೇ ಚಿತ್ರಮಂದಿರಗಳಲ್ಲಿ ಟಿಕೆಟ್ ದರವು ಮನಸೋ ಇಚ್ಛೆ (500 ರೂ. 1000 ರೂ. 1500 ರೂ.) ಏರಿಸಿ ಸಾರ್ವಜನಿಕರಿಂದ ಪಡೆಯುತ್ತಿರುವಂತಹ ಚಿತ್ರಮಂದಿರಗಳ ವಿರುದ್ಧ ತಕ್ಷಣ ಕಾನೂನು ರೀತಿಯ ಕ್ರಮಕೈಗೊಂಡು ಮುಂಬರುವ ಪ್ರಾದೇಶಿಕ ಭಾಷೆಯ ಚಿತ್ರಗಳಿಗೂ ಅನುಕೂಲ ಮಾಡಿ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿ ಎಂದು ಕೆಎಫ್ ಪಿಎ ಅಧ್ಯಕ್ಷ ಉಮೇಶ್ ಬಣಕಾರ್ ನೇತೃತ್ವದ ತಂಡ ಮನವಿ ಮಾಡಿತ್ತು.
ಈ ಮನವಿ ಬೆನ್ನಲ್ಲೆ ಇದೀಗ ಚಿತ್ರಮಂದಿರಗಳು ಮಧ್ಯರಾತ್ರಿ 3 ಗಂಟೆಗೆ 4 ಗಂಟೆಗೆ ಇದ್ದ ಶೋಗಳನ್ನು ರದ್ದು ಮಾಡಿದ್ದು 6.30ರ ಶೋಗಳು ಪ್ರದರ್ಶನಗೊಳ್ಳಲಿವೆ. ಇನ್ನು ಪಿವಿಆರ್, ಐನಾಕ್ಸ್ ಹೊರತು ಪಡಿಸಿ ಸಿಂಗಲ್ ಸ್ಕ್ರೀನ್ ಗಳಲ್ಲಿ 200 ರೂಪಾಯಿ ಟಿಕೆಟ್ ದರ ಇದ್ದರೆ, ಪಿವಿಆರ್ ಐನಾಕ್ಸ್ ನಲ್ಲಿ 300 ರೂಪಾಯಿಯಿಂದ 1,500 ರೂಪಾಯಿವರೆಗೂ ಟಿಕೆಟ್ ದರವಿದೆ.

KFPA ಮನವಿ ಬೆನ್ನಲ್ಲೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಕಾನೂನು ಬಾಹಿರವಾಗಿ 5-12-24 ರ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ ಚಿತ್ರಮಂದಿರಗಳ ಪರವಾನಗಿಯನ್ನು ರದ್ದುಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



