ಸೆನ್ಸಾರ್ ಮುಗಿಸಿದ ವಿಜಯ್ ರಾಘವೇಂದ್ರ ನಟನೆಯ 'ರಿಪ್ಪನ್ ಸ್ವಾಮಿ': ಜನವರಿಯಲ್ಲಿ ತೆರೆಗೆ
ಚಿತ್ರದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಜಯ್ ಅವರು ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಚಂದ್ರಶೇಖರ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಯುವ ನಿರ್ದೇಶಕ ಕಿಶೋರ್ ಮೂಡುಬಿದ್ರೆ ಆ್ಯಕ್ಷನ್- ಕಟ್ ಹೇಳಿರುವ ಹಾಗೂ ವಿಜಯ್ ರಾಘವೇಂದ್ರ ಅವರು ನಾಯಕನಾಗಿ ನಟಿಸಿರುವ ರಿಪ್ಪನ್ಸ್ವಾಮಿ ಚಿತ್ರದ ಸೆನ್ಸಾರ್ ಮುಗಿದಿದ್ದು, ಸಿನಿಮಾಕ್ಕೆ ‘ಯು/ಎ’ ಸರ್ಟಿಫಿಕೇಶನ್ ದೊರೆತಿದೆ. ಚಿತ್ರವು 2025ರ ಜನವರಿ ತಿಂಗಳಲ್ಲಿನಲ್ಲಿ ಬಿಡುಗಡೆಗೆ ಸಜ್ಜಾಗಿದೆ.
ಚಿತ್ರದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಜಯ್ ಅವರು ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಚಂದ್ರಶೇಖರ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ವೈದ್ಯೆ ಪಾತ್ರದಲ್ಲಿ ಅಶ್ವಿನಿಯವರು ನಟಿಸಿದ್ದಾರೆ.
ಚಿತ್ರದ ಚಿತ್ರೀಕರಣ ಕೊಪ್ಪ, ಕಳಸ ಮತ್ತು ಬಾಳೆಹೊನ್ನೂರಿನಂತಹ ಸುಂದರವಾದ ಸ್ಥಳಗಳಲ್ಲಿ ನಡೆದಿದ್ದು, ಕೇವಲ 48 ದಿನಗಳಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಲಾಗಿದೆ.
ಕಿಶೋರ್ ಮೂಡುಬಿದ್ರೆ ನಿರ್ದೇಶನದ ಈ ಚಿತ್ರ ಪಂಚಾಂನನ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದೆ. ಚಿತ್ರಕ್ಕೆ ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುಯೆಲ್ ಅಬಿ ಸಂಗೀತ ಸಂಯೋಜಿಸಿದ್ದಾರೆ. ರಂಗನಾಥ್ ಸಿಎಂ ಅವರು ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ. ಶಶಾಂಕ್ ನಾರಾಯಣ್ ಸಂಕಲನ ನೀಡಿದ್ದಾರೆ. ಚಿತ್ರದ ಪೋಷಕ ಪಾತ್ರದಲ್ಲಿ ಪ್ರಕಾಶ್ ತೂಮಿನಾಡ್, ವಜ್ರಧೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ ಮತ್ತು ಕೃಷ್ಣ ಮೂರ್ತಿ ಕವತಾರ್ ಕಾಣಿಸಿಕೊಂಡಿದ್ದಾರೆ.
ಈ ನಡುವೆ ರಿಪ್ಪನ್ ಸ್ವಾಮಿ ಜೊತೆಜೊತೆಗೆ ವಿಜಯ್ ರಾಘವೇಂದ್ರ ಅವರು ನಿರ್ದೇಶಕ ಪಿ.ಸಿ.ಶೇಖರ್ ಅವರೊಂದಿಗೆ ಇನ್ನೂ ಹೆಸರಿಡದ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರವು ರೈತರ ಹೋರಾಟ ಹಾಗೂ ಗೆಲುವಿನ ಕುರಿತಾಗಿ ಆಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



