ಉಪೇಂದ್ರ ನಟನೆಯ ಬಹುನಿರೀಕ್ಷಿತ ಚಿತ್ರ ನಾಳೆ ತೆರೆಗೆ: 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ UI ಅಬ್ಬರ
ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.

ರಿಯನ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ ಯುಐ ಚಿತ್ರ ನಾಳೆ (ಡಿ.20) ವಿಶ್ವದಾದ್ಯಂತ 4,000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, 9 ವರ್ಷಗಳ ನಂತರ ಉಪೇಂದ್ರ ನಿರ್ದೇಶನದಲ್ಲಿ ಬರುತ್ತಿರುವ ಈ ಸಿನಿಮಾ ಬಗ್ಗೆ ಜನರಲ್ಲಿ ಕುತೂಹಲ ಮನೆ ಮಾಡಿದೆ.
ಚಿತ್ರದ ಸಹ ನಿರ್ಮಾಪಕ ನವೀನ್ ಮನೋಹರ್ ಅವರು, ಚಿತ್ರಕ್ಕೆ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಬಹುತೇಕ ಫುಲ್ ಆಗಿದೆ. ಚಿತ್ರದ ಮೊದಲ ಪ್ರದರ್ಶನವು ಡಿಸೆಂಬರ್ 20 ರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗಲಿದೆ.
‘ಯುಐ’ ಚಿತ್ರದಲ್ಲಿ ಹಲವು ವಿಶೇಷಗಳಿದ್ದು, ಈ ಪೈಕಿ ಆಧುನಿಕ ತಂತ್ರಜ್ಞಾನಗಳ ಬಳಕೆ ಕೂಡ ಒಂದಾಗಿದೆ. ಜೊತೆಗೆ ಇದರ ಇಡೀ ಚಿತ್ರೀಕರಣವನ್ನು ಕತ್ತಲೆಯಲ್ಲಿಯೇ ಮಾಡಿರುವುದು ಮತ್ತೊಂದು ವಿಶೇಷ. ಸಾಮಾನ್ಯವಾಗಿ ಇರುಳಿನ ದೃಶ್ಯಗಳನ್ನು ಇರುಳಿನಲ್ಲೇ ಚಿತ್ರೀಕರಣ ಮಾಡಲಾಗುತ್ತದೆ ಅಥವಾ ಹಗಲಿನಲ್ಲಿ ಚಿತ್ರೀಕರಣ ಮಾಡಿ ನೈಟ್ ಎಫೆಕ್ಟ್ ನೀಡಲಾಗುತ್ತದೆ. ಇದನ್ನು ಡೇ ಫಾರ್ ನೈಟ್ ಎನ್ನಲಾಗುತ್ತದೆ. ಆದರೆ ‘ಯುಐ’ ಚಿತ್ರದಲ್ಲಿ‘ನೈಟ್ ಫಾರ್ ಡೇ’ ಕಾನ್ಸೆಪ್ಟ್ ಬಳಸಲಾಗಿದೆ. ‘ನೈಟ್ ಫಾರ್ ಡೇ’ ಪ್ರಯೋಗ ಮಾಡಿರುವುದು ಅಪರೂಪ. ಸ್ಯಾಂಡಲ್‌ವುಡ್‌ನಲ್ಲಿ ಇದೇ ಮೊದಲಾಗಿದೆ.
ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಣವಿದೆ. ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್ ಚಂದ್ರು ಮನೋಹನ್ ಹಾಗೂ ನಾಗೇಂದ್ರ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ವಿ.ಎನ್.ಪ್ರೊಡಕ್ಷನ್ಸ್ ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



