ಸಿನಿಮಾ ಸುದ್ದಿ

'ಒಂದು ಸರಳ ಪ್ರೇಮಕಥೆ'ಗೆ ಸಿನಿಪ್ರಿಯರ ಮೆಚ್ಚುಗೆ: 2ನೇ ವಾರವೂ ಉತ್ತಮ ಪ್ರದರ್ಶನ

ಡಾ. ರಾಜ್‌ಕುಮಾರ್ ಅವರ ಮೊಮ್ಮಗ ವಿನಯ್ ರಾಜ್‌ಕುಮಾರ್ ಅಭಿನಯದ 'ಒಂದು ಸರಳ ಪ್ರೇಮಕಥೆ' ಚಿತ್ರ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಸಿನಿಪ್ರಿಯರಷ್ಟೇ ಅಲ್ಲದೆ, ಸೆಲೆಬ್ರಿಟಿಗಳೂ ಕೂಡ ಉತ್ತಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

'ಒಂದು ಸರಳ ಪ್ರೇಮಕಥೆ'ಗೆ ಸಿನಿಪ್ರಿಯರ ಮೆಚ್ಚುಗೆ: 2ನೇ ವಾರವೂ ಉತ್ತಮ ಪ್ರದರ್ಶನ
ನಟ ರಂಗಾಯಣ ರಘು ಜೊತೆ ಸ್ಯಾಂಡಲ್ ವುಡ್ ನಾಯಕ ನಟಿಯರು.
Published On :

ಡಾ. ರಾಜ್‌ಕುಮಾರ್ ಅವರ ಮೊಮ್ಮಗ ವಿನಯ್ ರಾಜ್‌ಕುಮಾರ್ ಅಭಿನಯದ 'ಒಂದು ಸರಳ ಪ್ರೇಮಕಥೆ' ಚಿತ್ರ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಸಿನಿಪ್ರಿಯರಷ್ಟೇ ಅಲ್ಲದೆ, ಸೆಲೆಬ್ರಿಟಿಗಳೂ ಕೂಡ ಉತ್ತಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಸುನಿ ಅವರ ನಿರ್ದೇಶನ ಹಾಗೂ ವಿನಯ್ ರಾಜ್ ಕುಮಾರ್ ಅವರ ಪಾತ್ರಕ್ಕೆ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. ಸಿಂಪಲ್ ಸುನಿ ತಾನೊಬ್ಬ ಉತ್ತಮ ನಿರ್ದೇಶಕ ಎನ್ನುವುದನ್ನು ಈಗಾಗಲೇ ಸಾಬೀತು ಮಾಡಿದ್ದು, ಅವರ ಬತ್ತಳಿಕೆಯಿಂದ ಬಂದ 'ಒಂದು ಸರಳ ಪ್ರೇಮಕಥೆ' ಚಿತ್ರ ಕೂಡ ಜನಕ್ಕೆ ಇಷ್ಟವಾಗಿದೆ.

ತಮ್ಮ ನವಿರಾದ ಕಚಗುಳಿ ಇಡುವ ಸಂಭಾಷಣೆ, ಉತ್ತಮ ಸಂಗೀತ, ಹಾಸ್ಯ, ಒನ್‌ಲೈನ್ ಪಂಚಿಂಗ್‌ ಡೈಲಾಗ್‌ಗಳಿಂದಲೇ ಸುನಿ ಯಶಸ್ಸು ಪಡೆದವರು. ಇಲ್ಲಿ ಕೂಡ ಸಂಗೀತ, ಪ್ರೇಮದ ಕತೆಯನ್ನು ನವಿರಾದ ಹಾಸ್ಯದ ಮೂಲಕ ಹೇಳಿ ಗೆಲುವು ಪಡೆದಿದ್ದಾರೆ.

ಮೊದಲನೇ ವಾರ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆ ಹೆಚ್ಚಳ ಕಂಡಿದ್ದು, ಇದು ಚಿತ್ರತಂಡಕ್ಕೆ ಹುರುಪು ನೀಡಿದೆ.

ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಂತಸದಲ್ಲಿರುವ ಚಿತ್ರತಂಡ, ಮತ್ತೊಂದು ಹೊಸ ಚಿತ್ರಕ್ಕೆ ಕೈಜೋಡಿಸುವ ಇಂಗಿತ ವ್ಯಕ್ತಪಡಿಸಿದೆ. ಶೀಘ್ರದಲ್ಲೇ ಚಿತ್ರದ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದೆ.

ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ವಿನಯ್ ರಾಜ್​​ಕು​ಮಾರ್ ನಾಯಕನಾಗಿ, 'ರಾಧಾ ಕೃಷ್ಣ' ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್, ಸ್ವಾತಿಷ್ಠ ಕೃಷ್ಣನ್ ನಾಯಕಿಯರಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್​​ಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಸೇರಿದಂತೆ ಹಲವರಿದ್ದಾರೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ. ರಾಮ್ ಮೂವೀಸ್ ಬ್ಯಾನರ್ ಅಡಿ ಮೈಸೂರು ರಮೇಶ್ ಬಂಡವಾಳ ಹೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.