ಬಾಕ್ಸ್ ಆಫೀಸ್‌ನಲ್ಲಿ ದರ್ಶನ್ ಅಭಿನಯದ ಕಾಟೇರ ಅಬ್ಬರ; ಮೂರೇ ದಿನದಲ್ಲಿ ದಾಖಲೆಯ ಗಳಿಕೆ!
ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.

ಬೆಂಗಳೂರು: ನಟ ದರ್ಶನ್ ಅಭಿನಯದ, ತರುಣ್ ಸುಧೀರ್ ನಿರ್ದೇಶಿಸಿರುವ ‘ಕಾಟೇರ’ ಇದೀಗ ರಾಜ್ಯದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಟೇರ ಸಿನಿಮಾಗೆ ಸಿನಿಪ್ರಿಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬಿಡುಗಡೆಯಾದ ಮೂರೇ ದಿನಕ್ಕೆ ಗಲ್ಲಾಪೆಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದೆ.
ಡಿಸೆಂಬರ್ 29ರಂದು ಚಿತ್ರ ರಾಜ್ಯದಾದ್ಯಂತ ತೆರೆಕಂಡಿದ್ದು, ಚಿತ್ರ ಬಿಡುಗಡೆಯಾದ ಮೂರನೇ ದಿನಕ್ಕೆ ಕಾಟೇರ ಸಿನಿಮಾ ಬರೋಬ್ಬರಿ 20.94 ಕೋಟಿ ರೂ. ಸಂಗ್ರಹಿಸಿದೆ. ಮೊದಲನೇ ದಿನ ಕಾಟೇರ 19.79 ಕೋಟಿ ರೂ. ಗಳಿಸಿತ್ತು. ಎರಡನೇ ದಿನ 17.35 ಕೋಟಿ ರೂ. ಗಳಿಸಿತ್ತು. ಈ ಮೂಲಕ ಚಿತ್ರ ಮೂರು ದಿನಗಳಲ್ಲಿ ರಾಜ್ಯದಾದ್ಯಂತ ಒಟ್ಟು 58.8 ಕೋಟಿ ರೂ. ಸಂಗ್ರಹಿಸಿದೆ.
ದಿನದಿಂದ ದಿನಕ್ಕೆ ಕಾಟೇರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಹಲವು ಶೋಗಳನ್ನು ಹೆಚ್ಚಿಸಲಾಗಿದೆ. ದರ್ಶನ್ ಅಭಿಮಾನಿಗಳಷ್ಟೇ ಅಲ್ಲದೆ ಸಿನಿಪ್ರಿಯರು ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಭರ್ಜರಿ ಓಪನಿಂಗ್ ಪಡೆದುಕೊಂಡಿರುವ ಕಾಟೇರ ಮೂರನೇ ದಿನ ಕೂಡ ಅಬ್ಬರಿಸಿದೆ. ಬಾಕ್ಸ್ ಆಫೀಸ್‌ನಲ್ಲಿ ತನ್ನ ನಾಗಾಲೋಟ ಮುಂದುವರೆಸಿದೆ.
ದರ್ಶನ್ ಕೃತಜ್ಞತೆ
ಕಾಟೇರ ಸಿನಿಮಾದ ಯಶಸ್ಸಿಗೆ ಪ್ರತಿಕ್ರಿಯಿಸಿರುವ ನಟ ದರ್ಶನ್, ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ ಕಾಟೇರ ಚಿತ್ರತಂಡದ ಮನತುಂಬಿದೆ. ಮಾತೇ ಬರುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಚಿತ್ರದಲ್ಲಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ.
ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ, ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


