ಸಿನಿಮಾ ಸುದ್ದಿ

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜು!

'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಈ ಬೇಸಿಗೆಯಲ್ಲಿ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ 'ಟ್ವಿನ್' ದ್ವೀಪ ರಾಷ್ಟ್ರದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ.

ಪ್ರಭಾಸ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಜಪಾನ್‌ನಲ್ಲಿ ಬಿಡುಗಡೆಗೆ ಸಜ್ಜು!
ಸಲಾರ್ ಚಿತ್ರದಲ್ಲಿ ನಟ ಪ್ರಭಾಸ್
Published On :

ಹೈದರಾಬಾದ್: 'ಸಲಾರ್: ಭಾಗ 1 - ಕದನ ವಿರಾಮ' ಚಿತ್ರವು ಈ ಬೇಸಿಗೆಯಲ್ಲಿ ಜಪಾನಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಚಿತ್ರವನ್ನು ಜಪಾನಿನ ಚಲನಚಿತ್ರ ವಿತರಣಾ ಕಂಪನಿ 'ಟ್ವಿನ್' ದ್ವೀಪ ರಾಷ್ಟ್ರದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ.

'ಸಲಾರ್ ಈ ಬೇಸಿಗೆಯಲ್ಲಿ ಜಪಾನ್‌ನಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ವಿನ್ 2 ಮೂಲಕ ಚಿತ್ರ ತೆರೆಕಾಣುತ್ತಿದೆ' ಎಂದು ಚಿತ್ರತಂಡ ಶನಿವಾರ 'ಸಲಾರ್'ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಇದರೊಂದಿಗೆ ಸಲಾರ್ ಮಾರ್ಚ್ 7 ರಂದು ಲ್ಯಾಟಿನ್ ಅಮೆರಿಕದಲ್ಲಿ ಸ್ಪ್ಯಾನಿಷ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ.

ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ 'ಸಲಾರ್: ಭಾಗ 1 - ಕದನ ವಿರಾಮ' ಡಿಸೆಂಬರ್ 22 ರಂದು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಿದೆ. ಚಿತ್ರವು ವಿಶ್ವದಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ 650 ಕೋಟಿ ರೂ. ಗಳಿಕೆ ಕಂಡಿದೆ.

ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ.

ಚಿತ್ರದಲ್ಲಿ ಶ್ರುತಿ ಹಾಸನ್, ಈಶ್ವರಿ ರಾವ್, ಜಗಪತಿ ಬಾಬು ಮತ್ತು ಶ್ರೀಯಾ ರೆಡ್ಡಿ ಕೂಡ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.