ಪ್ರಭಾಸ್ ಅಭಿನಯದ ಸಲಾರ್- ಭಾಗ 2ರ ಚಿತ್ರೀಕರಣಕ್ಕೆ ದಿನಾಂಕ ನಿಗದಿ
ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಚಿತ್ರದ ಎರಡನೇ ಭಾಗವು ಯಾವಾಗ ಸೆಟ್ಟೇರುತ್ತದೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿದ್ದು, ಚಿತ್ರೀಕರಣ ಯಾವಾಗ ಪ್ರಾರಂಭವಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಭಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರತಂಡ ಸದ್ಯ ಯಶಸ್ಸಿನ ಅಲೆಯಲ್ಲಿ ತೇಲುತ್ತಿದೆ. ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಎರಡನೇ ಭಾಗವು ಯಾವಾಗ ಸೆಟ್ಟೇರುತ್ತದೆ ಎಂಬುದರ ಕುರಿತು ಸಾಕಷ್ಟು ಊಹಾಪೋಹಗಳಿದ್ದು, ಸಲಾರ್ ಎರಡನೇ ಭಾಗದ ಚಿತ್ರೀಕರಣ ಮಾರ್ಚ್‌ನಲ್ಲಿ ಪ್ರಾರಂಭವಾಗಲಿದೆ ಎಂದು ಚಿತ್ರತಂಡಕ್ಕೆ ಹತ್ತಿರದ ಮೂಲಗಳು ತಿಳಿಸಿವೆ.
ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ. ಸಲಾರ್- ಭಾಗ 2 ರಲ್ಲಿ ಅಂತಿಮ ಹಣಾಹಣಿಗೆ ವೇದಿಕೆ ಸಿದ್ಧಪಡಿಸಲಾಗಿದೆ.
ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರನ್ನು ಹೊರತುಪಡಿಸಿ, ಜಗಪತಿ ಬಾಬು, ಶ್ರುತಿ ಹಾಸನ್ ಮತ್ತು ಪ್ರಮೋದ್ ಸಹ ನಟಿಸಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಸದ್ಯ ದೊಡ್ಮನೆ ಕುಡಿ ಯುವ ರಾಜಕುಮಾರ್ ಅವರ ಚೊಚ್ಚಲ ಚಿತ್ರವಾದ ಯುವ, ತಮಿಳಿನಲ್ಲಿ ರಘು ತಾತ ಮತ್ತು ಡಾ. ಸೂರಿ ನಿರ್ದೇಶನದ ಶ್ರೀಮುರಳಿ ಅಭಿನಯದ ಬಘೀರಾ ಸೇರಿದಂತೆ ಹಲವು ಆಕರ್ಷಕ ಯೋಜನೆಗಳನ್ನು ಹೊಂದಿದೆ. ಇದರ ಹೊರತಾಗಿ, ಬಹು ನಿರೀಕ್ಷಿತ ಕಾಂತಾರ- ಅಧ್ಯಾಯ 1 ಅನ್ನು ಕೂಡ ಹೊಂದಿದೆ. ನಿಸ್ಸಂದೇಹವಾಗಿ ಈ ಚಿತ್ರವು ಈ ವರ್ಷ ತೆರೆಕಾಣುತ್ತಿರುವ ಅತಿದೊಡ್ಡ ಚಿತ್ರಗಳಲ್ಲಿ ಒಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


