ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!
ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ಗದಗ : ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.
ನಟ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದಾನೆ. ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ.
ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು (ಪೊಲೀಸ್ ಬೆಂಗಾವಲು ವಾಹನ) ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಸದ್ಯ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ವಿದ್ಯುತ್ ಶಾಕ್ ನಿಂದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ನಟ ಮೃತರ ಮನೆಗೆ ಭೇಟಿ ನೀಡಿದ್ದರು. ಅದಾದ ನಂತರ ನಟ ಯಶ್ ಗಾಯಾಳುಗಳನ್ನು ನೋಡಲು ಗದಗದ ಆಸ್ಪತ್ರೆಗೆ ತೆರಳಿದ್ದರು. ಗದಗಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ವಾಪಸಾಗುತ್ತಿದ್ದರು.
ಈ ವೇಳೆ ಯಶ್ ನೋಡಲು ಅಭಿಮಾನಿಯೊಬ್ಬ ವೇಗವಾಗಿ ಬಂದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


