ಸಂಕ್ರಾಂತಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರ ಶುಭಾಶಯ!
ಕಾಟೇರ ಗೆಲುವಿನ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಕಾಟೇರ ಗೆಲುವಿನ ಖುಷಿಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಹಲವು ಸಿನಿತಾರೆಯರು ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ದರ್ಶನ್, ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.
ಇನ್ನೂ ಕಾಟೇರ ಬೆಡಗಿ ಆರಾಧನಾ, ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಶುಭಾಶಯ ಕೋರಿದ್ದಾರೆ.
ಸಂಕ್ರಾಂತಿ ಹಬ್ಬದ ದಿನದಂದು ಮಂಡ್ಯ ತಾಲ್ಲೂಕಿನ ಚೀರನಹಳ್ಳಿ ಗ್ರಾಮದ ಅಂಬರೀಶ್ ಅವರ ಅಪ್ಪಟ ಅಭಿಮಾನಿ ತೇಜುಗೌಡ, ರಾಸುವಿಗೆ ಅಭಿಷೇಕ್ ಅಂಬರೀಶ್ ಅವರ ಭಾವಚಿತ್ರ ಬಿಡಿಸಿ ಅಭಿಮಾನ ತೋರಿದ್ದಾರೆ.
— Sumalatha Ambareesh
ಈ ಅಭಿಮಾನಕ್ಕೆ ತುಂಬು ಹೃದಯದ ಧನ್ಯವಾದಗಳು. ತಮಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ತೇಜುಗೌಡ ಅವರೆ. pic.twitter.com/oNHDbSRgFs
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


