ಒಟಿಟಿಗೆ ಬಂತು 'ಸಲಾರ್': ಇಲ್ಲಿದೆ ಫುಲ್ ಡಿಟೈಲ್ಸ್
ಪ್ರಭಾಸ್ ಹಾಗೂ ಪೃಥ್ವಿರಾಜ ಸುಕುಮಾರನ್ ಮುಖ್ಯ ಪಾತ್ರದಲ್ಲಿರುವ, ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಒಟಿಟಿಗೆ ಬರಲು ಸಿದ್ಧವಾಗಿದೆ. ನಾಳೆ (ಜ.20) Salaar: Part 1 - Ceasefire ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ.

ಮುಂಬೈ: ಪ್ರಭಾಸ್ ಹಾಗೂ ಪೃಥ್ವಿರಾಜ ಸುಕುಮಾರನ್ ಮುಖ್ಯ ಪಾತ್ರದಲ್ಲಿರುವ, ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಒಟಿಟಿಗೆ ಬರಲು ಸಿದ್ಧವಾಗಿದೆ. ನಾಳೆ (ಜ.20) Salaar: Part 1 - Ceasefire ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ.
ಫ್ಯಾನ್ ಇಂಡಿಯಾ ಚಿತ್ರ ಸಲಾರ್ ಚಿತ್ರ, ಗಲ್ಲಾಪೆಟ್ಟಿಗೆಯಲ್ಲಿ 400 ಕೋಟಿ ರೂ ಗೂ ಹೆಚ್ಚು ಗಳಿಕೆ ಮಾಡಿದೆ. ಇದೀಗ ತೆಲುಗು, ಕನ್ನಡ. ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಒಟಿಟಿಯಲ್ಲಿ ತೆರೆ ಕಾಣುತ್ತಿದೆ. ಆದರೆ ಹಿಂದಿ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುವ ದಿನಾಂಕವನ್ನು ಘೋಷಣೆ ಮಾಡಿಲ್ಲ.
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ತಾಂತ್ರಿಕವಾಗಿ ‘ಕೆಜಿಎಫ್’ ತಂಡವೇ ಇದೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ‘A’ (ವಯಸ್ಕರಿಗೆ ಮಾತ್ರ) ಪ್ರಮಾಣ ಪತ್ರ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


