ಸಿನಿಮಾ ಸುದ್ದಿ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ

ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ
ಸಂಗ್ರಹ ಚಿತ್ರ
Published On :

ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಾಮಕರಣ ಶಾಸ್ತ್ರ ನೆರವೇರಿದ್ದು, ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ.

ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಈ ಹಿಂದೆ ಮಗಳು ಜನಿಸಿದಾಗಲೇ ನಾಮಕರಣ ಯಾವಾಗ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಲೇ ಇದ್ದರು. ಈವೇಳೆ ಧ್ರುವ ಸರ್ಜಾ ಅವರು ಒಂದು ಸಮಯ ನೋಡಿ ನಾಮಕರಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಅಂತಿಮವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನದಂತೆ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.