ಸಿನಿಮಾ ಸುದ್ದಿ

ದುಬೈನಲ್ಲಿ ಜುಲೈ 14 ರಂದು 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಪ್ರೀಮಿಯರ್ ಶೋ!

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಜುಲೈ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ.

ದುಬೈನಲ್ಲಿ ಜುಲೈ 14 ರಂದು 'ವಿದ್ಯಾರ್ಥಿ ವಿದ್ಯಾರ್ಥಿನಿಯರೇ' ಪ್ರೀಮಿಯರ್ ಶೋ!
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಸ್ಟಿಲ್
Published On :

ರಾಜ್ಯಕ್ಕಿಂತ ಮೊದಲ ಬೇರೆ ದೇಶಗಳಲ್ಲಿ ಕನ್ನಡ ಚಿತ್ರಗಳು ಪ್ರದರ್ಶನ ಕಾಣುವುದು ಕಡಿಮೆ. ಇದುವರೆಗೂ ಬೆರಳಣಿಕೆಯಷ್ಟು ಚಿತ್ರಗಳು ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕಿಂತ ಮೊದಲು ಅಮೇರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿದೆ. ಈಗ ಈ ಸಾಲಿಗೆ ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಹ ಸೇರಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಜುಲೈ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಒಎಂಜಿ ಕಂಪೆನಿಯು ಗಲ್ಫ್ ರಾಷ್ಟ್ರಗಳಿಗೆ ಚಿತ್ರದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದ್ದು, ಚಿತ್ರವನ್ನು ಮೊದಲು ದುಬೈನಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಚಿತ್ರದ ಹೆಸರೇ ಹೇಳುವಂತೆ ಇದು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕುರಿತಾದ ಚಿತ್ರ. ಕಾಲೇಜ್ ಹುಡುಗ-ಹುಡುಗಿಯರ ಹದಿಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಈ ಚಿತ್ರದಲ್ಲಿ ತೆರೆದಿಡಲಾಗಿದೆಯಂತೆ. ಹಾದಿ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಈ ಚಿತ್ರದಲ್ಲಿ ಮಾಡಲಾಗಿದೆಯಂತೆ. ಹಾಗಾಗಿ, ಇದು ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಡುವುದಕ್ಕಿಂತ, ಪೋಷಕರು ತಪ್ಪದೇ ನೋಡಲೇಬೇಕಾದ ಚಿತ್ರ ಎಂದು ಹೇಳುತ್ತಾರೆ ನಿರ್ದೇಶಕ ಅರುಣ್‍ ಅಮುಕ್ತ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’, Rapper ಮತ್ತು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೂರನೆಯ ಚಿತ್ರವಾದರೂ, ಬಿಡುಗಡೆ ಆಗುತ್ತಿರುವ ಮೊದಲ ಚಿತ್ರ. ಚಿತ್ರದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ‘ಕಾಕ್ರೋಚ್’ ಸುಧಿ ಮುಂತಾದವರು ನಟಿಸಿದ್ದಾರೆ.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸುತ್ತಿರುವ ಈ ಚಿತ್ರಕ್ಕೆ, ಅರುಣ್‍ ಅಮುಕ್ತ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಜೇತ್‍ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.