ಸಿನಿಮಾ ಸುದ್ದಿ

ರಾಮ್ ಚರಣ್ ಮುಂದಿನ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್! ಚಿತ್ರ ತಂಡದಿಂದ ಘೋಷಣೆ

ಆರ್ ಆರ್ ಆರ್ ಖ್ಯಾತಿಯ ರಾಮ್ ಚರಣ್ ಅವರ 16ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಉಪನ್ನ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ ಇನ್ನೂ ಹೆಸರಿಡದ RC 16" ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿರುವುದು ಪಕ್ಕಾ ಆಗಿದೆ.

ರಾಮ್ ಚರಣ್ ಮುಂದಿನ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್! ಚಿತ್ರ ತಂಡದಿಂದ ಘೋಷಣೆ
ಶಿವರಾಜ್ ಕುಮಾರ್,ರಾಮ್ ಚರಣ್ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ಇಂದು 62ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಅನೇಕ ಹೊಸ ಸಿನಿಮಾಗಳು ಘೋಷಣೆ ಆಗಿವೆ.

ಸೂಪರ್ ಸ್ಟಾರ್ ರಜನಿಕಾಂತ್, ಧನುಷ್ ಜೊತೆಗೆ ಅಭಿನಯದೊಂದಿಗೆ ಈಗಾಗಲೇ ಕಾಲಿವುಡ್ ನಲ್ಲಿ ಯಶಸ್ವಿಯಾಗಿರುವ ಕರುನಾಡ ಚಕ್ರವರ್ತಿ ಇದೀಗ ತೆಲುಗು ಚಿತ್ರರಂಗವನ್ನು ಪ್ರವೇಶಿಸುತ್ತಿರುವುದು ಕನ್ಫರ್ಮ್ ಆಗಿದೆ. ಆರ್ ಆರ್ ಆರ್ ಖ್ಯಾತಿಯ ರಾಮ್ ಚರಣ್ ಅವರ 16ನೇ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ.

ಉಪನ್ನ ಖ್ಯಾತಿಯ ಬುಚ್ಚಿ ಬಾಬು ಸನಾ ನಿರ್ದೇಶನದ ಇನ್ನೂ ಹೆಸರಿಡದ RC 16" ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಶಿವಣ್ಣ ಅಭಿನಯಿಸುತ್ತಿರುವುದು ಪಕ್ಕಾ ಆಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಚಿತ್ರ ತಯಾರಿಕ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಮಾಹಿತಿ ಹಂಚಿಕೊಂಡಿದ್ದು, ಶಿವಣ್ಣನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಈ ಚಿತ್ರವನ್ನು ವೃದ್ಧಿ ಸಿನಿಮಾಸ್, ಸುಕುಮಾರ್ ರೈಟಿಂಗ್ಸ್ ಮತ್ತು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸಿದ್ದು, ಸಂಗೀತ ಮಾಂತ್ರಿಕ ಎ.ಆರ್ .ರೆಹಮಾನ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ವೆಂಕಟ ಸತೀಶ್ ಕಿಲಾರು ನಿರ್ಮಾಣದ ಈ ಚಿತ್ರಕ್ಕೆ ಸನಾ ಅವರದೇ ಚಿತ್ರಕಥೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.