ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಕರ್ನಾಟಕದ ವಿತರಣಾ ಹಕ್ಕು KVN ಪ್ರೊಡಕ್ಷನ್ಸ್ ಪಾಲು
ನಾಗ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಚಿತ್ರವು ಜೂನ್ 27 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕುಗಳನ್ನು ಕೆವಿಎನ್ ಪ್ರೊಡಕ್ಷನ್ಸ್ ಪಡೆದುಕೊಂಡಿದೆ.

ನಾಗ ಅಶ್ವಿನ್ ನಿರ್ದೇಶನದ ಪ್ರಭಾಸ್ ಅಭಿನಯದ 'ಕಲ್ಕಿ 2898 AD' ಚಿತ್ರವು ಜೂನ್ 27 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದ ಕರ್ನಾಟಕದ ವಿತರಣಾ ಹಕ್ಕುಗಳನ್ನು ಕೆವಿಎನ್ ಪ್ರೊಡಕ್ಷನ್ಸ್ ಪಡೆದುಕೊಂಡಿದೆ. ಬಿ & ಬಿ: ಬುಜ್ಜಿ ಮತ್ತು ಭೈರವ ಎಂಬ ಎರಡು ಭಾಗಗಳ ಹದಿನೈದು ನಿಮಿಷಗಳ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡುವ (ಅಮೆಜಾನ್ ಪ್ರೈಮ್ ವಿಡಿಯೋ) ವೇಳೆ ಪ್ರೊಡಕ್ಷನ್ ಹೌಸ್ ಪರವಾಗಿ ಸುಪ್ರಿತ್ ಈ ಸುದ್ದಿಯನ್ನು ದೃಢಪಡಿಸಿದರು.
ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿರುವ ಕಲ್ಕಿ 2898 AD ಚಿತ್ರದಲ್ಲಿ ಭೈರವನ ಪಾತ್ರದಲ್ಲಿ ಪ್ರಭಾಸ್ ಕಾಣಿಸಿಕೊಂಡಿದ್ದು, ಬುಜ್ಜಿಯಾಗಿ (ವಿಶೇಷ ಕಾರು) ಕಾಣಿಸಿಕೊಂಡಿದೆ. ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಈ ಹೈ-ಬಜೆಟ್ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಸಂತೋಷ್ ನಾರಾಯಣನ್, ಸಂಕಲನಕಾರರಾಗಿ ಕೋಟಗಿರಿ ವೆಂಕಟೇಶ್ವರ ರಾವ್ ಮತ್ತು ಛಾಯಾಗ್ರಾಹಕರಾಗಿ ಜೊರ್ಡ್ಜೆ ಸ್ಟೋಜಿಲ್ಜ್ಕೋವಿಕ್ ಇದ್ದಾರೆ. 2020ರಲ್ಲಿ 'Project K' ಎಂದು ಹೆಸರಿಟ್ಟು ಸೆಟ್ಟೇರಿದ ಈ ಬಹುಭಾಷಾ ಸಿನಿಮಾವನ್ನು ವೈಜಯಂತಿ ಮೂವೀಸ್ನ ಸಂಸ್ಥಾಪಕ ಅಶ್ವಿನಿ ದತ್ ನಿರ್ಮಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



