ಸಿನಿಮಾ ಸುದ್ದಿ

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.

ಉಮಾಪತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ!
Published On :

ಚೆನ್ನೈ: ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್ ಮತ್ತು ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಜೂನ್ 10ರಂದು ಚೆನ್ನೈನ ಗೇರುಗಂಬಾಕ್ಕಂನಲ್ಲಿರುವ ಶ್ರೀ ಯೋಗಾ ಆಂಜನೇಯ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಬಂಧಿಕರು ಮತ್ತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ವಿವಾಹ ನೆರವೇರಿತು.

ವಿವಾಹ ಸಮಾರಂಭದಲ್ಲಿ ಐಶ್ವರ್ಯಾ ಅವರೊಂದಿಗೆ ಪಟ್ಟತ್ತು ಯಾನೈ ಚಿತ್ರದಲ್ಲಿ ಕೆಲಸ ಮಾಡಿದ ನಟ ವಿಶಾಲ್ ಸೇರಿದಂತೆ ನಟರಾದ ಕಾರ್ತಿ, ಧ್ರುವ ಸರ್ಜಾ, ಜಗಪತಿ ಬಾಬು, ಸಮುದ್ರಕನಿ, ವಿಜಯಕುಮಾರ್ ಮತ್ತು ಸೆಂಥಿಲ್ ಭಾಗವಹಿಸಿದ್ದರು.

ಇದರೊಂದಿಗೆ ಕೆಎಸ್ ರವಿಕುಮಾರ್, ಜಿಕೆ ರೆಡ್ಡಿ, ಎಸ್ಆರ್ ಪ್ರಭು ಮತ್ತು ಕೆಇ ಜ್ಞಾನವೇಲ್ ರಾಜಾ ಕೂಡ ಭಾಗವಹಿಸಿದ್ದರು. ನಟಿ ಐಶ್ವರ್ಯಾ ಅವರು ತಮ್ಮ ವಿವಾಹದ ಫೋಟೊಗಳನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ವರ್ಷವಷ್ಟೇ ಇಬ್ಬರ ಡೇಟಿಂಗ್ ಸುದ್ದಿ ಹೊರಬಿದ್ದಿತ್ತು. ಬಳಿಕ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಈ ಯುವ ಯೋಡಿ ಕುಟುಂಬಸ್ಥರ ಒಪ್ಪಿಗೆ ಪಡೆದು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

Story image

ದಂಪತಿಯ ಆರತಕ್ಷತೆ ಜೂನ್ 14 ರಂದು ಜನಪ್ರಿಯ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ದಕ್ಷಿಣದ ಚಲನಚಿತ್ರೋದ್ಯಮದ ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.