Insta ದಲ್ಲಿ ದರ್ಶನ್ Unfollow: ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಸಮರ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಈ ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.
ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜತೆ ಇರೋ ಫೋಟೋ ಹಂಚಿಕೊಂಡಿದ್ದರು. 10 ವರ್ಷಗಳ ಸಂಬಂಧ’ ಎಂದು ಟ್ಯಾಗ್ ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



