ಸಿನಿಮಾ ಸುದ್ದಿ

ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಪ್ರಕರಣ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ!
ಸಂಗ್ರಹ ಚಿತ್ರ
Published On :

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಪ್ರಕರಣ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಜೊತೆ ಸ್ಯಾಂಡಲ್ ವುಡ್ ನ ಸ್ಟಾರ್ ಹಾಸ್ಯ ನಟ ಚಿಕ್ಕಣ್ಣ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.

ಹತ್ಯೆಯಾದ ಶನಿವಾರ ಮಧ್ಯಾಹ್ನದಿಂದ ಸ್ಟೋನಿಬ್ರೂಕ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಜೊತೆ ಚಿಕ್ಕಣ್ಣ ಅವರು ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಎಂದು ದರ್ಶನ್ ಹೊರಟಿದ್ದರು ಎಂದು ವರದಿಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಇದೀಗ ಚಿಕ್ಕಣ್ಣ ಅವರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆಂದು ಹೇಳಲಾಗುತ್ತಿದೆ. ಹಾಸ್ಯನಟ ವಿಚಾರಣೆಗೆ ಹಾಜರಾದ ಬಳಿಕ ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಯಾವುದಾದರೂ ಚರ್ಚೆಯಾಗಿತ್ತಾ ಎಂಂಬದರ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.