ದುನಿಯಾ ವಿಜಯ್ ನಿರ್ದೇಶನದ 'ಭೀಮ' ರಿಲೀಸ್ ಡೇಟ್ ಫಿಕ್ಸ್!
ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.

ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ರಿಲೀಸ್ ಬಗ್ಗೆ ಹೊಸ ಅಪ್ ಡೇಟ್ ಹೊರಬಿದ್ದಿದೆ. ಭೀಮ ಸಿನಿಮಾವನ್ನು ವಿಜಯ್ ಕುಮಾರ್ ನಿರ್ದೇಶಿಸಿದ್ದಾರೆ.
ನಟ ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿರುವ ‘ಭೀಮ’ ಸಿನಿಮಾವನ್ನು ಆಗಸ್ಟ್ 9ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮಧ್ಯೆ ‘ಭೀಮ’ ಸಿನಿಮಾ ಕನ್ನಡದ ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ವಿಜಯ್ ಅವರು ‘ಸಲಗ’ ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದರು. ಇದು ಅವರ ನಿರ್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನಿರ್ದೇಶನ ಮಾಡಿದ್ದಾರೆ ವಿಜಯ್. ಚಿತ್ರದಲ್ಲಿ ಭೀಮನಿಗೆ ಜೋಡಿಯಾಗಿ ಅಶ್ವಿನಿ ನಟಿಸಿದ್ದು, ರಂಗಾಯಣ ರಘು, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಕಲ್ಯಾಣಿ ಮತ್ತಿತರರು ಅಭಿನಯಿಸಿದ್ದಾರೆ. ಮಾಸ್ತಿ ಸಂಭಾಷಣೆ ಚಿತ್ರಕ್ಕಿದ್ದು, ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



