ರಾಜ್ ಬಿ ಶೆಟ್ಟಿ 'ರೂಪಾಂತರ': ಹಳೆಯ ತಂಡದೊಂದಿಗೆ ಹೊಸ ಚಿತ್ರ, ಫಸ್ಟ್ ಲುಕ್ ರಿಲೀಸ್!
ಮಲಯಾಳಂನ ಟರ್ಬೋ ಸಿನಿಮಾದಲ್ಲಿ ಖಳನಾಯಕನಾಗಿ ಮಿಂಚಿದ್ದ ರಾಜ್ ಬಿ ಶೆಟ್ಟಿ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಮಲಯಾಳಂನ ಟರ್ಬೋ ಸಿನಿಮಾದಲ್ಲಿ ಖಳನಾಯಕನಾಗಿ ಮಿಂಚಿದ್ದ ರಾಜ್ ಬಿ ಶೆಟ್ಟಿ ಇದೀಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ವಿಭಿನ್ನ ಹಾಗೂ ವಿಶಿಷ್ಠ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರುವ ರಾಜ್ ಬಿ ಶೆಟ್ಟಿ ಈ ಬಾರಿ ‘ರೂಪಾಂತರ’ದ ಮೂಲಕ ಎಂಟ್ರಿ ಕೊಡಲಿದ್ದಾರೆ.
ಹೊಸ ಸಿನಿಮಾಗೆ ‘ರೂಪಾಂತರ’ ಎಂದು ಟೈಟಲ್ ಫೈನಲ್ ಆಗಿದೆ. ಸಿನಿಮಾ ಫಸ್ಟ್ ಲುಕ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.
ನಟ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಹೊಸ ಸಿನಿಮಾ ಅಪ್ಡೇಟ್ ನೀಡಿದ್ದಾರೆ.
ಕೆಲ ಸಿನಿಮಾಗಳು ಮನಸ್ಸಿಗೆ ಬಲು ಹತ್ತಿರ. ಅಂತಹ ಒಂದು ಸುಂದರವಾದ ಚಿತ್ರ ರೂಪಾಂತರ. ಈ ಸಿನಿಮಾದ ಭಾಗವಾಗಿರುವುದು, ಜೊತೆಗೆ ಈ ಚಿತ್ರವನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ಜವಾಬ್ದಾರಿ ನನಗೆ ಲಭಿಸಿರುವುದು ನನ್ನ ವೃತ್ತಿ ಜೀವನದ ಭಾಗ್ಯ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.
ಒಂದು ಮೊಟ್ಟೆಯ ಕಥೆ ಚಿತ್ರತಂಡದ ಜೊತೆಯೇ ರಾಜ್ ಬಿ ಶೆಟ್ಟಿ ಮತ್ತೆ ಕೈ ಜೋಡಿಸಿದ್ದಾರೆ. ರಾಜ್ ಬಿ ಶೆಟ್ಟಿಯವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಂಸ್‌ನ ಮೂಲಕ ತೆರೆಗೂ ತರುತ್ತಿದ್ದಾರೆ.
ಒಂದು ಮೊಟ್ಟೆಯ ಕಥೆಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ, ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ. ಮಿಧುನ್ ಮುಕುಂದನ್ ಸಂಗೀತ ನೀಡಲಿದ್ದಾರೆ. ರಾಜ್ ಬಿ ಶೆಟ್ಟಿ ಅವರಲ್ಲದೆ, ಚಿತ್ರದಲ್ಲಿ ಭರತ್ ಜಿಬಿ, ಹನುಮಕ್ಕ, ಅಂಜನ್ ಭಾರದ್ವಾಜ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



