ಪ್ರಶಾಂತ್ ನೀಲ್ ಮನೆಯಲ್ಲಿ ರಿಷಬ್ ಶೆಟ್ಟಿ ಮತ್ತು ಜ್ಯೂನಿಯರ್ ಎನ್ ಟಿಆರ್: ಫೋಟೋ ವೈರಲ್
ಕೆಜಿಎಫ್ ಸಿನಮಾ ಖ್ಯಾತಿಯ ಪ್ರಶಾಂತ್ ನೀಲ್, ‘ಕಾಂತಾರ’ ಮೂಲಕ ಖ್ಯಾತಿ ಪಡೆದ ರಿಷಬ್ ಶೆಟ್ಟಿ, ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಜ್ಯೂನಿಯರ್ ಎನ್‌ಟಿಆರ್ ಒಂದೇ ಫ್ರೇಮ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಜಿಎಫ್ ಸಿನಮಾ ಖ್ಯಾತಿಯ ಪ್ರಶಾಂತ್ ನೀಲ್, ‘ಕಾಂತಾರ’ ಮೂಲಕ ಖ್ಯಾತಿ ಪಡೆದ ರಿಷಬ್ ಶೆಟ್ಟಿ, ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಜ್ಯೂನಿಯರ್ ಎನ್‌ಟಿಆರ್ ಒಂದೇ ಫ್ರೇಮ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಮಾರ್ಚ್ 1ರಂದು ಪ್ರಶಾಂತ್ ನೀಲ್ ಮನೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಜ್ಯೂನಿಯರ್ ಎನ್‌ಟಿಆರ್ ಆಗಮಿಸಿದ್ದರು. ಎನ್‌ಟಿಆರ್ ಜತೆ ಅವರ ಪತ್ನಿ, ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.
ಈಗಾಗಲೇ ಪ್ರಶಾಂತ್ ನೀಲ್ ಅವರು ಜ್ಯೂನಿಯರ್ ಎನ್‌ಟಿಆರ್ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಕಾಂತಾರ’ ಹಾಗೂ ‘ಕೆಜಿಎಫ್’ ಸರಣಿಯನ್ನು ನಿರ್ಮಾಣ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಹೀಗಾಗಿ, ಪ್ರಶಾಂತ್ ನೀಲ್ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ.
‘ದೇವರ' ಸಿನಿಮಾ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್. ಕೊರಟಾಲ ಶಿವ ಈ ಸಿನಿಮಾ ನಿರ್ದೇಶಕರು. `ದೇವರ’ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ನಿರ್ಮಾಪಕರು ಹೊಸ ಅಪ್ ಡೇಟ್ ನೀಡಿದ್ದಾರೆ. ಈ ಚಿತ್ರವು 2024ರ ಅಕ್ಟೋಬರ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ. ಮೊದಲ ಭಾಗಕ್ಕೆ ‘ದೇವರ: ಭಾಗ 1’ ಎಂದು ಹೆಸರಿಡಲಾಗಿದೆ. ಈ ಮುಂಚೆ ಚಿತ್ರತಂಡ ಏಪ್ರಿಲ್ 5 ರಂದು ಸಿನಿಮಾ ರಿಲೀಸ್ ಡೇಟ್‌ವನ್ನು ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



