ಸಸ್ಪೆನ್ಸ್ ಹಾಗೂ ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಜೋಗ್ 101 ಮಾರ್ಚ್ 7 ರಂದು ತೆರೆಗೆ
ನಟ ವಿಜಯ್ ರಾಘವೇಂದ್ರ ಅವರು ತಮ್ಮ ಮುಂಬರುವ ಚಿತ್ರ ಜೋಗ್ 101 ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ.

ಸಸ್ಪೆನ್ಸ್ ಡ್ರಾಮಾಗಳ ಸರಣಿಗೆ ಹೆಸರುವಾಸಿಯಾಗಿರುವ ನಟ ವಿಜಯ್ ರಾಘವೇಂದ್ರ ಅವರು ತಮ್ಮ ಮುಂಬರುವ ಚಿತ್ರ ಜೋಗ್ 101 ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ.
ವಿಜಯ್ ಕನ್ನಡಿಗ ನಿರ್ದೇಶನದ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ಜೋಗ್ 101 ಚಿತ್ರ ಮಾರ್ಚ್ 7 ರಂದು ತೆರೆಗೆ ಬರಲು ಸಿದ್ಧವಾಗಿದೆ.
"ನಾನು ಬ್ಯಾಕ್-ಟು-ಬ್ಯಾಕ್ ಚಿತ್ರಗಳ ಭಾಗವಾಗಲು ಅದೃಷ್ಟಶಾಲಿಯಾಗಿದ್ದೇನೆ. ಆದರೆ ಪ್ರಸ್ತುತ ನಾನು ಅಭಿನಯಿಸಿರುವ ಚಿತ್ರ ಜೋಗ್ 101 ತುಂಬಾ ವಿಭಿನ್ನ ಕಥಾಹಂದರ ಹೊಂದಿದ್ದು, ಇದು ಸಸ್ಪೆನ್ಸ್ ಹಾಗೂ ಆ್ಯಕ್ಷನ್ ಥ್ರಿಲ್ಲರ್ ಚಿತ್ರ" ಎಂದು ವಿಜಯ್ ರಾಘವೇಂದ್ರ ಅವರು ಹೇಳಿದ್ದಾರೆ.
ಮೂಲತಃ ಲೇಖಕರಾಗಿರುವ ವಿಜಯ್ ಕನ್ನಡಿಗ ಅವರು ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಕೆಲವು ಚಿತ್ರಗಳಲ್ಲಿ ವಿಜಯ್ ಕನ್ನಡಿಗ ಅವರು ಅಭಿನಯಿಸಿದ್ದಾರೆ.
ಚಿತ್ರದ ಶೀರ್ಷಿಕೆಯ ಮಹತ್ವವನ್ನು ವಿವರಿಸಿದ ವಿಜಯ್ ಕನ್ನಡಿಗ ಅವರು, “ಚಿತ್ರದಲ್ಲಿ 101 ಸಂಖ್ಯೆಗೆ ವಿಶೇಷ ಅರ್ಥವಿದೆ. ಇದು ಕೇವಲ ಯಾದೃಚ್ಛಿಕ ಸಂಖ್ಯೆಯಲ್ಲ; ಇದು ಒಂದು ಸಂಕೇತವಾಗಿದೆ. ಪ್ರಕರಣದ ಸುತ್ತಲಿನ ರಹಸ್ಯವನ್ನು ಅನ್ಲಾಕ್ ಮಾಡುವ ಸುಳಿವು ನೀಡುತ್ತದೆ. ಇದು ಜೋಗ ಜಲಪಾತದ ಹಿನ್ನೆಲೆಯ ನಡುವೆ ತೆರೆದುಕೊಳ್ಳುತ್ತದೆ ಎಂದಿದ್ದಾರೆ.
ಜೋಗ್ 101 ಚಿತ್ರ ಸಸ್ಪೆನ್ಸ್ ಹಾಗೂ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದರೂ ಚಿತ್ರದಲ್ಲಿ ಲವ್, ಕಾಮಿಡಿ ಹೀಗೆ ಎಲ್ಲಾ ಅಂಶಗಳು ಇವೆ. ಅವಿನಾಶ್ ಆರ್ ಬಾಸೂತ್ಕರ್ ಸಂಗೀತ ನೀಡಿರುವ 2 ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಲಕ್ಷಾಂತರ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ನನ್ನ ಚಿತ್ರಗಳಲ್ಲಿ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದು ಇರಲಿಲ್ಲ. ‘ಜೋಗ್ 10’ ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿದೆ ಎಂದು ವಿಜಯ್ ರಾಘವೇಂದ್ರ ಅವರು ಹೇಳಿದ್ದಾರೆ.
ಸೆವೆನ್ ಸ್ಟಾರ್ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಟಿ ಆರ್ ರಾಘವೇಂದ್ರ ನಿರ್ಮಿಸಿರುವ ಜೋಗ್ 101 ಚಿತ್ರದಲ್ಲಿ ತೇಜಸ್ವಿನಿ ಶೇಖರ್ ಅವರು ನಾಯಕಿಯಾಗಿ ನಟಿಸುತ್ತಿದ್ದು, ಗೋವಿಂದೇಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ ಮುಂತಾದವರು ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



