ಸಿನಿಮಾ ಸುದ್ದಿ

ಅಮಿತಾಭ್ ಬಚ್ಚನ್ ಆರೋಗ್ಯದ ಬಗ್ಗೆ ಆತಂಕ; ಅವರ ಕಚೇರಿ, ಆಸ್ಪತ್ರೆಯಿಂದ ಯಾವುದೇ ಮಾಹಿತಿ ಇಲ್ಲ

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಅಮಿತಾಭ್ ಬಚ್ಚನ್ ಆರೋಗ್ಯದ ಬಗ್ಗೆ ಆತಂಕ; ಅವರ ಕಚೇರಿ, ಆಸ್ಪತ್ರೆಯಿಂದ ಯಾವುದೇ ಮಾಹಿತಿ ಇಲ್ಲ
ಅಮಿತಾಭ್ ಬಚ್ಚನ್
Published On :

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಆದರೆ ಬಿಗ್ ಬಿ ಆರೋಗ್ಯದ ಬಗ್ಗೆ ಅವರ ಕಚೇರಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆತಂಕಗೊಂಡಿದ್ದಾರೆ.

81 ವರ್ಷದ ಅಮಿತಾಭ್ ಬಚ್ಚನ್ ಅವರು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆಸ್ಪತ್ರೆಯಿಂದ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಅವರ ಕಚೇರಿಯಿಂದಲೂ ಯಾವುದೇ ಮಾಹಿತಿ ಇಲ್ಲ.

ಬಿಗ್ ಬಿ ಆರೋಗ್ಯದ ಊಹಾಪೋಹಗಳು ಹರಿದಾಡುತ್ತಿದ್ದು, ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದರೆ, ಕಾಲಿಗೆ ಸರ್ಜರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ.

ಈ ವಿಷಯ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ವರದಿಯ ಪ್ರಕಾರ, ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾಗುವ ಮುನ್ನ‘ಯಾವಾಗಲೂ ಕೃತಜ್ಞನಾಗಿರುತ್ತೇನೆ’ ಎಂದು ಬರೆದುಕೊಂಡಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.