ಸಿನಿಮಾ ಸುದ್ದಿ

ಯಶ್ 'ಟಾಕ್ಸಿಕ್' ಚಿತ್ರದಲ್ಲಿ ಕರೀನಾ ಕಪೂರ್ ಜಾಗಕ್ಕೆ ನಯನತಾರಾ ಆಯ್ಕೆ!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್ ' ಚಿತ್ರದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕರೀನಾ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬಂತಹ ಸುದ್ದಿ ಹರಿದಾಡುತಿತ್ತು. ಆದರೆ, ಇದೀಗ ಆ ಜಾಗಕ್ಕೆ ನಯನತಾರಾ ಫಿಕ್ಸ್ ಆಗಿದ್ದಾರೆ.

ಯಶ್ 'ಟಾಕ್ಸಿಕ್' ಚಿತ್ರದಲ್ಲಿ ಕರೀನಾ ಕಪೂರ್ ಜಾಗಕ್ಕೆ ನಯನತಾರಾ ಆಯ್ಕೆ!
ನಯನತಾರಾ
Published On :

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್ ' ಚಿತ್ರದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕರೀನಾ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬಂತಹ ಸುದ್ದಿ ಹರಿದಾಡುತಿತ್ತು. ಆದರೆ, ಇದೀಗ ಆ ಜಾಗಕ್ಕೆ ನಯನತಾರಾ ಫಿಕ್ಸ್ ಆಗಿದ್ದಾರೆ.

ಹೌದು. ದಿನಾಂಕ ಹೊಂದಾಣಿಕೆಯಾಗದೇ ಅವರು ಈ ಚಿತ್ರಕ್ಕೆ ಕಾಲ್ ಶೀಟ್ ಕೊಡಲು ಆಗುತ್ತಿಲ್ಲ. ಇದರಿಂದ ಅವರು ಹಿಂದೆ ಸರಿದಿದ್ದು, ಚಿತ್ರ ತಂಡ ಕಿಯಾರಾ ಅಡ್ವಾಣಿ ಅವರನ್ನು ಸಂಪರ್ಕಿಸಿತಂತೆ. ಆದರೆ, ಅವರು ಕೂಡಾ ಒಪ್ಪಿಗೆ ಸೂಚಿಸಿಲ್ಲ. ಹಾಗಾಗೀ ನಿರ್ದೇಶಕಿ ಗೀತು ಮೋಹನ್ ದಾಸ್ ಅವರು ಬಹುಭಾಷಾ ನಟಿ ನಯನತಾರಾ ಅವರನ್ನು ಸಂಪರ್ಕಿಸಿದ್ದು, ಅವರಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಪಿಂಕ್ ವಿಲ್ಲಾ ವೆಬ್ ಸೈಟ್ ವರದಿ ಮಾಡಿದೆ.

ಕೆವಿಎನ್ ಪ್ರೊಡಕ್ಷನ್ ಹಾಗೂ ಯಶ್ ಅವರ Monster Mind Creations ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರ 2025ರ ಏಪ್ರಿಲ್ 10 ರಂದು ಕನ್ನಡ, ಇಂಗ್ಲೀಷ್, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.