ಸಿನಿಮಾ ಸುದ್ದಿ

ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ; ವೀಡಿಯೋ ವೈರಲ್!

ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಮಾರಣಾಂತಿಕ ಹಲ್ಲೆ; ವೀಡಿಯೋ ವೈರಲ್!
ಚೇತನ್ ಚಂದ್ರ
Published On :

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಮೇಲೆ ಅಪರಿಚಿತ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕಗ್ಗಲಿಪುರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬೈಕ್‍ನಲ್ಲಿ ಹಿಂಬಾಲಿಸಿಕೊಂಡು ಬಂದ ಕೆಲ ಕಿಡಿಗೇಡಿಗಳು, ಬೈಕ್‍ಗೆ ಟಚ್ ಮಾಡಿದ್ದೀರಿ ಎಂದು ಗಲಾಟೆ ಶುರುಮಾಡಿದರು. ಈ ವೇಳೆ ದುಡ್ಡು ಕೇಳಲು ಆರಂಭಿಸಿದರು. ಹಣ ಕೊಡೋದಿಲ್ಲ ಎಂದು ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನ್ನ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದರು ಎಂದು ಹೇಳಿದ್ದಾರೆ.

ಇಂದು 'ಅಮ್ಮಂದಿರ ದಿನಾಚರಣೆ' ಸಲುವಾಗಿ ಅಮ್ಮನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ಕಗ್ಗಲಿಪುರದ ಬಳಿ ಬಂದಾಗ ಯಾರೂ ಆಗುಂತಕ ಕಿಡಿಗೇಡಿಗಳು ನನ್ನ ಕಾರನ್ನು ಹಿಂಬಾಲಿಸಿಕೊಂಡು ಬಂದು ಈ ಕೃತ್ಯ ಎಸಗಿದ್ದಾರೆ ಎಂದಿದ್ದಾರೆ.

ಈ ಸಂಬಂಧ ಅವರು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಚೇತನ್ ತೆರಳಿದ್ದಾರೆ. ನಟ ಚೇತನ್ ಚಂದ್ರ ಅವರು, ಪಿಯುಸಿ, ಪ್ರೇಮಿಸಂ, ರಾಜಧಾನಿ, ಕುಂಭರಾಶಿ ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.