ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆ ಪಾಲು
ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದಲ್ಲಿ ಇಂದ್ರಜಿತ್ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆಯು ಪಡೆದುಕೊಂಡಿದ್ದು, ಹೊಸಬರ ಚಿತ್ರಕ್ಕೆ 1 ಕೋಟಿ ರೂ.ಗೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದಲ್ಲಿ ಇಂದ್ರಜಿತ್ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಟೈಮ್ ಬರುತ್ತೆ’ ಎಂಬ ಮೊದಲ ಹಾಡನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದು, ಹಿಟ್ ಆಗಿದೆ. ಇದೀಗ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆಯು ಪಡೆದುಕೊಂಡಿದ್ದು, ಹೊಸಬರ ಚಿತ್ರಕ್ಕೆ 1 ಕೋಟಿ ರೂ.ಗೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಜಸ್ಸಿ ಗಿಫ್ಟ್ ಮತ್ತು ಚಂದನ್ ಶೆಟ್ಟಿ ಸೇರಿದಂತೆ ಹಲವಾರು ಸಂಗೀತ ನಿರ್ದೇಶಕರು ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
'ಈ ರೋಮಾಂಚನಕಾರಿ ಬೆಳವಣಿಗೆಯು ಚಿತ್ರದ ಸಂಗೀತದ ಶ್ರೇಷ್ಠತೆಯ ಬಗ್ಗೆ ಉದ್ಯಮದ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ. ಪ್ರಬಲವಾದ ಪಾತ್ರವರ್ಗ ಮತ್ತು ನಾನು ನಿರ್ದೇಶನದ ಹೊಣೆ ಹೊತ್ತಿರುವುದರಿಂದ, ಗೌರಿ ಮೂಲಕ ಪ್ರೇಕ್ಷಕರಿಗೆ ಉತ್ತಮ ಮನರಂಜನೆ ನೀಡಲು ನಾವು ಸಾಕಷ್ಟು ಕೆಲಸ ಮಾಡುತ್ತಿದ್ದೇವೆ' ಎಂದು ನಿರ್ದೇಶಕ ಇಂದ್ರಜಿತ್ ಹೇಳುತ್ತಾರೆ.
ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ಸಾನ್ಯಾ ಅಯ್ಯರ್ ಅವರು ನಾಯಕಿಯಾಗಿ ಗೌರಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದಲ್ಲದೆ, ಮಿಸ್ ಟೀನ್ ಯೂನಿವರ್ಸ್ ಆದ ಸ್ವೀಝಲ್ ಮತ್ತು ಚಂದು ಗೌಡ ನಟಿಸಿದ್ದಾರೆ. ಚಿತ್ರಕ್ಕೆ ಎಜೆ ಶೆಟ್ಟಿ ಅವರ ಛಾಯಾಗ್ರಹಣ ಮತ್ತು ಡಿಫರೆಂಟ್ ಡ್ಯಾನಿ ಪೈಟಿಂಗ್ ದೃಶ್ಯಗಳನ್ನು ಸಂಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



