ಹಾಫ್ ಸೆಂಚುರಿ ಬಾರಿಸಿದ 'ಬ್ಲಿಂಕ್': ಒಟಿಟಿಯಲ್ಲೂ ಚಿತ್ರಕ್ಕೆ ಮೆಚ್ಚುಗೆ
ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್ ಟ್ರಾವೆಲ್ ಸಿನಿಮಾ “ಬ್ಲಿಂಕ್” ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದ್ದು, ಒಟಿಟಿಯಲ್ಲೂ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.

ಬೆಂಗಳೂರು: ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್ ಟ್ರಾವೆಲ್ ಸಿನಿಮಾ “ಬ್ಲಿಂಕ್” ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದ್ದು, ಒಟಿಟಿಯಲ್ಲೂ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.
ಅಮೇಜಾನ್ ಪ್ರೈಮ್ ಒಟಿಟಿಗೆ ಎಂಟ್ರಿ ಕೊಟ್ಟ 4 ದಿನದಲ್ಲಿಯೇ ಚಿತ್ರವು 10 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್ ಕಾಣುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಸಿನಿಮಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಜನರು ಉತ್ತಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಕನ್ನಡ ಸಿನಿಮಾಗಳನ್ನು ಪ್ರೇಕ್ಷಕರು ನೋಡುತ್ತಿಲ್ಲ ಎಂಬ ಅಪವಾದದ ನಡುವೆ ʻಬ್ಲಿಂಕ್ʼ ಆಫ್ ಸೆಂಚುರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ಹಂಚಿಕೊಂಡಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಿರ್ಮಾಪಕ ರವಿಚಂದ್ರ ಎ ಜೆ ಮಾತನಾಡಿ, ಸಿನಿಮಾ ಈ ಲೆವೆಲ್‌ಗೆ ಆಗುತ್ತದೆ ಎಂದುಕೊಂಡಿರಲಿಲ್ಲ. ಮನೆಯವರು ಖುಷಿಯಾಗಿದ್ದಾರೆ. ತಂಡ ಖುಷಿಯಾಗಬೇಕು ಎಂದರೆ ಅಂದುಕೊಂಡಿರುವ ದುಡ್ಡು ಬರಬೇಕು. ಇಡೀ ಸಿನಿಮಾ ತಂಡ ಪ್ರಾಮಾಣಿಕವಾಗಿ ದುಡಿದಿದೆ. ಅವರಿಗೆಲ್ಲಾ ಮುಂದೆ ಒಳ್ಳೆ ಸಿನಿ ಕರಿಯರ್ ಸಿಗಬೇಕು. ಆದಷ್ಟು ಬೇಗ ತೆಲುಗಿಗೂ ಡಬ್ ಮಾಡಿಸುತ್ತೇವೆ. ತಮಿಳು ಡಬ್ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಿನಿಮಾಗೆ ಭಾಷೆಯ ಎಲ್ಲೆ ಇಲ್ಲ ಎಂದು ಹೇಳಿದರು.
ನಟ ದೀಕ್ಷಿತ್ ಶೆಟ್ಟಿ ಮಾತನಾಡಿ, ʻಬಹಳ ಖುಷಿಯಾಗುತ್ತಿದೆ. ಎಷ್ಟೋ ವರ್ಷಗಳ ನಂತರ ಹೊಸಬರ ತಂಡ 50 ದಿನಗಳ ಕಾಲ ಸಿನಿಮಾವನ್ನು ಥಿಯೇಟರ್‌ನಲ್ಲಿ ಉಳಿಸಿಕೊಂಡಿದ್ದೇವೆ. ನಮಗೆ ನಂಬಲು ಆಗುತ್ತಿಲ್ಲ. ಮೊದಲ ದಿನದಿಂದ ಇಲ್ಲಿವರೆಗೂ ಬಹಳಷ್ಟು ಹೋರಾಟ ಮಾಡಿದ್ದೆವು. ನಾವು ಜನರನ್ನು ಕರೆದುಕೊಂಡು ಥಿಯೇಟರ್ ತುಂಬಿಸುತ್ತಿದ್ದೇವೆ ಎಂದು ಒಂದಷ್ಟು ಜನ ಮಾತಾನಾಡಿಕೊಂಡರು. ಹಾಗೇ ಹೇಳಿದವರಿಗೆ ಉತ್ತರ 50 ದಿನ. ಸಿನಿಮಾ ಅಷ್ಟು ಕೋಟಿ ಮಾಡಬೇಕು. ಇಷ್ಟು ಕೋಟಿ ಮಾಡಬೇಕು ಎನ್ನುವುದು ನನ್ನ ತಲೆಯಲ್ಲಿ ಇರಲಿಲ್ಲ. ನಿರ್ಮಾಪಕರು ಗೆಲ್ಲಬೇಕು. ನಿಲ್ಲಬೇಕು ಅನ್ನುವುದಷ್ಟೇ ಇತ್ತು. ಹಾಕಿದ ಬಂಡವಾಳ ವಾಪಸ್ ಬರುವುದರಲ್ಲಿದೆ. ಹೀಗಾಗಿ ಖುಷಿ ಇದೆ ಎಂದು ಭಾವಿಸಿದ್ದೇನೆ. ಈ ಗೆಲುವಿಗೆ ಕಾರಣರಾದ ಇಡೀ ತಂಡಕ್ಕೆ ಧನ್ಯವಾದ ತಿಳಿಸಿದರು.
ಶ್ರೀನಿಧಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಜನರ ಉತ್ತಮ ಪ್ರತಿಕ್ರಿಯೆಯಿಂದ ಸಂತೋಶವಾಗುತ್ತಿದೆ. ಇದು ಚಿತ್ರದ ಯಶಸ್ಸಿಗೆ ಮತ್ತಷ್ಟು ಉತ್ತೇಜನ ನೀಡಿದೆ ಎಂದು ಹೇಳಿದ್ದಾರೆ.
‘ಬ್ಲಿಂಕ್’ ಚಿತ್ರಕ್ಕೆ ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದು, ರವಿಚಂದ್ರ ಎ.ಜೆ. ಸಿನಿಮಾ ನಿರ್ಮಾಣ ಮಾಡಿದ್ದಾರೆ. ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದರೆ, ಚೈತ್ರಾ ಆಚಾರ್, ಗೋಪಾಲ್ ದೇಶಪಾಂಡೆ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



