ಸಿನಿಮಾ ಸುದ್ದಿ

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ನಂಜನಗೂಡು ದೇವಾಲಯಕ್ಕೆ ಶಿಲ್ಪಾಶೆಟ್ಟಿ ಭೇಟಿ
Published On :

ಮೈಸೂರು: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿಲ್ಪಾ ಶೆಟ್ಟಿ, ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಹರ್ಷ ವ್ಯಕ್ತಪಡಿಸಿದರು.

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ಪರಭಾಷೆಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಸಂಜಯ್​ ದತ್​, ಶಿಲ್ಪಾ ಶೆಟ್ಟಿ, ರವಿಚಂದ್ರನ್​, ರಮೇಶ್​ ಅರವಿಂದ್​ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಮೈಸೂರಿನಲ್ಲಿ ಶಿಲ್ಪಾ ಶೆಟ್ಟಿ ‘ಕೆಡಿ’ ಚಿತ್ರದ ಶೂಟಿಂಗ್ ​ನಲ್ಲಿ ಭಾಗಿ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.