ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ವಿಧಿವಶ
ಕೆ ಬಾಲಚಂಧರ್ ಅವರಂತಹ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್ ಅವರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಕೆಲಸ ಮಾಡಿದ್ದರು.

ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ಮತ್ತು ಖ್ಯಾತ ನಟ ಡೆಲ್ಲಿ ಗಣೇಶ್ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ಡೆಲ್ಲಿ ಗಣೇಶ್ ಅವರಿಗೆ ಅವರಿಗೆ 80 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಡೆಲ್ಲಿ ಗಣೇಶ್ ಅವರು, ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ಕೆ ಬಾಲಚಂಧರ್ ಅವರಂತಹ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್ ಅವರು, ಹಲವು ಸ್ಟಾರ್ ನಟ-ನಟಿಯರೊಟ್ಟಿಗೆ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಕೆಲಸ ಮಾಡಿದ್ದರು.
ಆರಂಭದಲ್ಲಿ ನಾಯಕ, ಎರಡನೇ ನಾಯಕ, ವಿಲನ್ ಪಾತ್ರಗಳಲ್ಲಿ ನಟಿಸಿದ ಡೆಲ್ಲಿ ಗಣೇಶ್, ವಯಸ್ಸಾದಂತೆ, ತಂದೆ, ಮಾವ, ಚಿಕ್ಕಪ್ಪ ಹೀಗೆ ಬೇರೆ ಬೇರೆ ಪಾತ್ರಗಳಲ್ಲಿ ನಟಿಸಲು ಆರಂಭಿಸಿದರು. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿಯೂ ನಟನೆ ಮಾಡಿದ್ದಾರೆ.
1976 ರಿಂದಲೂ ನಟಿಸುತ್ತಿರುವ ಡೆಲ್ಲಿ ಗಣೇಶ್ ಅವರು, ತಮಿಳು, ಮಲಯಾಳ, ತೆಲುಗು ಹಾಗೂ ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ ನಟಿಸಿರುವ ‘ಚೆನ್ನೈ ಎಕ್ಸ್ಪ್ರೆಸ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಸುಮಾರು 25ಕ್ಕೂ ಹೆಚ್ಚು ಟಿವಿ ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



