ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕ ಗುಂಡೇಟು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ

ಮುಂಬಯಿ: ಶಿವಸೇನೆ ನಾಯಕ, ಬಾಲಿವುಡ್ ನಟ ಗೋವಿಂದ ಅವರಿಗೆ ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ ಮಿಸ್ಫೈರ್ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ. ‘ಅವರು ತಮ್ಮ ಪರವಾನಗಿ ಗನ್ನ ಇಟ್ಟುಕೊಳ್ಳುತ್ತಿದ್ದರು. ಅದು ಅವರ ಕೈ ತಪ್ಪಿದ್ದು, ಬುಲೆಟ್ ಸಿಡಿದಿದೆ. ಅವರ ಕಾಲಿಗೆ ಗುಂಡು ತಾಗಿದೆ. ವೈದ್ಯರು ಬುಲೆಟ್ನ ತೆಗೆದಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದು, ಆರೋಗ್ಯ ಸ್ಥಿರವಾಗುತ್ತಿದೆ’ ಎಂದು ಗೋವಿಂದ ಅವರ ಮ್ಯಾನೇಜರ್ ಶಶಿ ಸಿನ್ಹಾ ಹೇಳಿದ್ದಾರೆ.
ವೈದ್ಯರು ಬುಲೆಟ್ ಅನ್ನು ತೆಗೆದಿದ್ದಾರೆ, ಗೋವಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದೀಗ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟನ ಸ್ಥಿತಿ ಸ್ಥಿರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



