'ಕನ್ನಡ ಚಿತ್ರಗಳ ಮರ್ಯಾದೆ ತೆಗೀಬೇಡಿ': Martin ಚಿತ್ರದ ರಿವ್ಯೂ ಮಾಡಿ ಕ್ಷಮೆ ಯಾಚಿಸಿದ ರೀಲ್ಸ್ ಸ್ಟಾರ್!
ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಗಮನ ಸೆಳೆದಿರುವ ನಟ ಸುಧಾಕರ್ ಗೌಡ, 'ಮಾರ್ಟಿನ್' ಸಿನಿಮಾ ನೋಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಬೆಂಗಳೂರು: ಖ್ಯಾತ ನಟ ಧ್ರುವಸರ್ಜಾ ಅವರ ಬಹು ನಿರೀಕ್ಷಿತ ಚಿತ್ರ ಮಾರ್ಟಿನ್ ಕುರಿತು ನೆಗೆಟಿವ್ ರಿವ್ಯೂ ಮಾಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ರೀಲ್ಸ್ ಹಾಗೂ ಕಿರುಚಿತ್ರ ನಟ ಸುಧಾಕರ್ ಗೌಡ ಇದೀಗ ಕ್ಷಮೆ ಕೋರಿದ್ದಾರೆ.
ಹೌದು.. ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಗಮನ ಸೆಳೆದಿರುವ ನಟ ಸುಧಾಕರ್ ಗೌಡ, 'ಮಾರ್ಟಿನ್' ಸಿನಿಮಾ ನೋಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಈ ವೇಳೆ ಸಿನಿಮಾ ಚೆನ್ನಾಗಿಲ್ಲ, ಚಿತ್ರತಂಡವೇ ಥಿಯೇಟರ್ಗಳಲ್ಲಿ ಫೇಕ್ ಬುಕ್ಕಿಂಗ್ ಮಾಡಿಸುತ್ತಿದೆ ಎಂದು ಆರೋಪ ಮಾಡಿದ್ದರು.
ದಿಢೀರನೆ ಸುಧಾಕರ್ ಮಾಡಿದ್ದ 'ಮಾರ್ಟಿನ್' ರಿವ್ಯೂ ವೀಡಿಯೋ ವ್ಯಾಪಕ ವೈರಲ್ ಆಗಿತ್ತು. ಅಲ್ಲದೆ ನಟ ಧ್ರುವ ಸರ್ಜಾ ಅಭಿಮಾನಿಗಳು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.
ಕ್ಷಮೆ ಯಾಚಿಸಿದ ನಟ ಸುಧಾಕರ್
ಇನ್ನು ಅವರ ರೀವ್ಯೂ ವಿಡಿಯೋಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ನಟ ಸುಧಾಕರ್ ಗೌಡ ಮತ್ತೊಂದು ವೀಡಿಯೋ ಮಾಡಿ ಧ್ರುವ ಸರ್ಜಾ ಹಾಗೂ ಅವರ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. 'ಮಾರ್ಟಿನ್' ಸಿನಿಮಾ ನೋಡಿ ನನಗೆ ಅನ್ನಿಸಿದ ಅಭಿಪ್ರಾಯವವನ್ನು ರಿವ್ಯೂ ವೀಡಿಯೋದಲ್ಲಿ ಹೇಳಿದ್ದೆ. ಆದರೆ ಅದು ಕೆಲವರಿಗೆ ಬೇಸರ ತಂದಿದೆ. ಹಾಗಾಗಿ ನಾನು ಅವರ ಕ್ಷಮೆ ಕೇಳುತ್ತೇನೆ. ನಾನು ಹೇಳಿದ್ದ ಕೆಲ ಅಂಶಗಳ ಬಗ್ಗೆ ಧ್ರವಸರ್ಜಾ ಅವರ ಅಭಿಮಾನಿಗಳು ಆಕ್ಷೇಪ ಎತ್ತಿದ್ದಾರೆ ಎಂದು ಹೇಳಿದ್ದಾರೆ.
ದೊಡ್ಡ ತಾರಾಗಣದ ಚಿತ್ರ
ಉದಯ್ ಕೆ ಮೆಹ್ತಾ 'ಮಾರ್ಟಿನ್' ಚಿತ್ರವನ್ನು ಬಹಳ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. 75 ಕೋಟಿ ರೂ.ಗೂ ಅಧಿಕ ಮೊತ್ತದಲ್ಲಿ ಸಿನಿಮಾ ತೆರೆಗೆ ತರಲಾಗಿದೆ. ಅರ್ಜುನ್ ಸರ್ಜಾ ಚಿತ್ರಕ್ಕೆ ಕಥೆ ಬರೆದಿದ್ದಾರೆ. ರವಿ ಬಸ್ರೂರು ಹಿನ್ನೆಲೆ ಸಂಗೀತವಿದೆ. ಸತ್ಯ ಹೆಗಡೆ ಛಾಯಾಗ್ರಹಣ ಕೂಡ ಮೆಚ್ಚುವಂತಿದೆ. ಚಿತ್ರದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಮಿಂಚಿದ್ದಾರೆ.
ಅನ್ವೇಷಿ ಜೈನ್, ಸುಕೃತಾ ವಾಗ್ಲೆ, ಚಿಕ್ಕಣ್ಣ, ಅಚ್ಯುತ್ ಕುಮಾರ್ ಸೇರಿದಂತೆ ದೊಡ್ಡ ತಾರಾಗಣ 'ಮಾರ್ಟಿನ್' ಚಿತ್ರದಲ್ಲಿದೆ. 240 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆದಿತ್ತು. ಧ್ರುವ ಸರ್ಜಾ 3 ವರ್ಷಗಳಿಂದ 'ಮಾರ್ಟಿನ್' ಚಿತ್ರಕ್ಕೆ ಕೆಲಸ ಮಾಡಿದ್ದರು. ಕೊನೆಗೂ ಸಿನಿಮಾ ತೆರೆಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



