ಸಿನಿಮಾ ಸುದ್ದಿ

ಬಿಳಿಚುಕ್ಕಿ ಹಳ್ಳಿಹಕ್ಕಿ ಪೋಸ್ಟರ್ ಅನಾವರಣಗೊಳಿಸಿದ ಮಹೇಶ್ ಗೌಡ

ಚರ್ಮದ ಕಾಯಿಲೆ ತೊನ್ನು(vitiligo)ಸುತ್ತ ಸುತ್ತುವರೆಯುವ ಈ ವಿಶಿಷ್ಟ ಸಿನಿಮಾದ ಮೂಲಕ ಗಮನ ಸೆಳೆದಿರುವ ಮಹೇಶ್ ಗೌಡ ಅವರು ದಸರಾ ಹಬ್ಬದ ಸಂಭ್ರಮದಲ್ಲಿ ವಿಶೇಷ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಿದೆ.

ಬಿಳಿಚುಕ್ಕಿ ಹಳ್ಳಿಹಕ್ಕಿ ಪೋಸ್ಟರ್ ಅನಾವರಣಗೊಳಿಸಿದ ಮಹೇಶ್ ಗೌಡ
ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರದ ಸ್ಟಿಲ್
Published On :

ನಾಯಕನಾಗಿ ನಟಿಸಿರುವ ನಿರ್ದೇಶಕ ಮತ್ತು ನಿರ್ಮಾಪಕ ಮಹೇಶ್ ಗೌಡ ಅವರು ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಪೋಸ್ಟ್ ಪ್ರೊಡಕ್ಷನ್‌ನ ಅಂತಿಮ ಹಂತಕ್ಕೆ ಪ್ರವೇಶಿಸುತ್ತಿದ್ದಾರೆ.

ಚರ್ಮದ ಕಾಯಿಲೆ ತೊನ್ನು(vitiligo)ಸುತ್ತ ಸುತ್ತುವರೆಯುವ ಈ ವಿಶಿಷ್ಟ ಸಿನಿಮಾದ ಮೂಲಕ ಗಮನ ಸೆಳೆದಿರುವ ಮಹೇಶ್ ಗೌಡ ಅವರು ದಸರಾ ಹಬ್ಬದ ಸಂಭ್ರಮದಲ್ಲಿ ವಿಶೇಷ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ.

ಈ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಒಂದು ಮಹತ್ವದ ಮೈಲಿಗಲ್ಲು ಎಂದು ಗುರುತಿಸಿಕೊಳ್ಳಲಿದೆ. ಏಕೆಂದರೆ ಇದು ವಿಟಲಿಗೋ ಅಂದರೆ, ತೊನ್ನಿನ ಭೂಮಿಕೆಯಲ್ಲಿ ತಯಾರಾದ ಚಿತ್ರ. "ಮೊದಲ ಬಾರಿಗೆ, ನಾವು ಈ ನಿರೂಪಣೆಯನ್ನು ಸತ್ಯಾಸತ್ಯತೆಯೊಂದಿಗೆ ಪ್ರತಿಧ್ವನಿಸುವ ರೀತಿಯಲ್ಲಿ ಚಿತ್ರೀಕರಿಸಿದ್ದೇವೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮಹೇಶ್ ವಿವರಿಸಿದ್ದಾರೆ.

ವಿಟಲಿಗೋ ಸಮಸ್ಯೆ ಎದುರಿಸುತ್ತಿರುವವರು ಸಾಮಾಜಿಕ, ಕೌಟುಂಬಿಕ ಮತ್ತು ವೈಯಕ್ತಿಕ ಸವಾಲುಗಳನ್ನು ತೋರಿಸಲಾಗಿದೆ ಎಲ್ಲವೂ ಆಕರ್ಷಕ ಮತ್ತು ಮನರಂಜನೆಯ ರೋಮ್-ಕಾಮ್ ಅನುಭವವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಸ್ವತಃ ವಿಟಲಿಗೋ ಸಮಸ್ಯೆಯಿಂದ ಬಳಲುವ ಮಹೇಶ್ ಅವರು, "ಬಿಳಿಚುಕ್ಕಿ ಹಳ್ಳಿಹಕ್ಕಿಯು ನಮ್ಮ ಜೀವನದೊಳಗಿನ ಸಂಬಂಧಗಳ ಮೇಲೆ ತಾಜಾತನವನ್ನನು ನೀಡುತ್ತದೆ. ಹಾಸ್ಯದೊಂದಿಗೆ ಸೂಕ್ಷ್ಮತೆಯನ್ನು ಸಮತೋಲನಗೊಳಿಸುತ್ತದೆ" ಎಂದು ಅವರು ಹಂಚಿಕೊಂಡಿದ್ದಾರೆ.

ರೊಮ್ಯಾಂಟಿಕ್ ಶೈಲಿಯಲ್ಲಿ ಸಾಗುವ ಈ ಚಿತ್ರದಲ್ಲಿ ಹಾಸ್ಯಕ್ಕೂ ಕೊರತೆ ಇಲ್ಲ. ನಿಖರವಾಗಿ ಹೇಳಬೇಕೆಂದರೆ ನಗಿಸುತ್ತಲೇ ಅಳಿಸುವ, ಬಹುಕಾಲ ಕಾಡುವ, ಎಲ್ಲ ವಯೋಮಾನದ, ಅಭಿರುಚಿಗಳ ಪ್ರೇಕ್ಷಕರಿಗೂ ಪಥ್ಯವಾಗುವಂತೆ ಈ ಚಿತ್ರವನ್ನು ಮಹೇಶ್ ಗೌಡ ರೂಪಿಸಿದ್ದಾರಂತೆ. ಎರಡು ಪಾತ್ರಗಳ ನಡುವಿನ ಬಂಧದ ಸುತ್ತಾ ಸಾಗೋ ಈ ಕಥನ ಪ್ರೇಕ್ಷಕರಿಗೆ ಬೇರೆಯದ್ದೇ ಥರದ ಫೀಲ್ ಕೊಡಲಿದೆ ಎಂಬ ನಂಬಿಕೆ ಮಹೇಶ್ ಗೌಡ ಅವರಲ್ಲಿದೆ.

ಹೊನುಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಿಯೋ ಆಂಟೋನಿ ಅವರ ಸಂಗೀತ ಮತ್ತು ಕಿರಣ್ ಸಿಎಚ್‌ಎಂ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.