ಸಿನಿಮಾ ಸುದ್ದಿ

ಕನ್ನಡದ ಹಿರಿಯ ಚಿತ್ರ ನಿರ್ದೇಶಕ ಚಿ. ದತ್ತರಾಜ್ ನಿಧನ

ಖ್ಯಾತ ಸಾಹಿತಿ ದಿವಂಗತ ಚಿ. ಉದಯ ಶಂಕರ್ ಅವರ ಸಹೋದರರಾಗಿದ್ದ ಚಿ. ದತ್ತರಾಜ್ ಅವರು ರಾಜ್ ಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಕನ್ನಡದ ಹಿರಿಯ ಚಿತ್ರ ನಿರ್ದೇಶಕ ಚಿ. ದತ್ತರಾಜ್ ನಿಧನ
ಚಿ.ದತ್ತರಾಜ್
Published On :

ಬೆಂಗಳೂರು: ಕಾಮನ ಬಿಲ್ಲು ಸೇರಿದಂತೆ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಖ್ಯಾತ ಸಾಹಿತಿ ದಿವಂಗತ ಚಿ. ಉದಯ ಶಂಕರ್ ಅವರ ಸಹೋದರರಾಗಿದ್ದ ಚಿ. ದತ್ತರಾಜ್ ಅವರು ರಾಜ್ ಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಅವರ ಅಭಿನಯದ ಕಾಮನಬಿಲ್ಲು, ಕೆರಳಿದ ಸಿಂಹ, ಅದೇ ಕಣ್ಣು, ಶ್ರುತಿ ಸೇರಿದಾಗ ಚಿತ್ರಗಳನ್ನು ನಿರ್ದೇಶಿಸಿದ್ದರು.

ಶಿವರಾಜ್ ಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಚಿತ್ರಗಳನ್ನು ನಿರ್ದೇಶಿಸಿದ ದತ್ತರಾಜ್ ಅವರು, ಮಂಜುಳ ನಟಿಸಿದ್ದ ರುದ್ರಿ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಇಂದು ಮಧ್ಯಾಹ್ನ ಹರಿಶ್ಚಂದ್ರ ಘಾಟ್ ನಲ್ಲಿ ದತ್ತರಾಜ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.