ಸಿನಿಮಾ ಸುದ್ದಿ

ಬಿಗ್ ಬಾಸ್ ಗೆ ಸುದೀಪ್​ ವಿದಾಯ: ಚರ್ಚೆಗೆ ಗ್ರಾಸವಾಯ್ತು ಟ್ವೀಟ್, ರೂಪೇಶ್ ರಾಜಣ್ಣ ಹೇಳಿದ್ದೇನು?

ಸುದೀಪ್ ಅವರಿಗೆ ಮಾಡಿದ ಅವಮಾನ ಸಹಿಸೋದಿಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ”

ಬಿಗ್ ಬಾಸ್ ಗೆ ಸುದೀಪ್​ ವಿದಾಯ: ಚರ್ಚೆಗೆ ಗ್ರಾಸವಾಯ್ತು ಟ್ವೀಟ್, ರೂಪೇಶ್ ರಾಜಣ್ಣ ಹೇಳಿದ್ದೇನು?
ಸುದೀಪ್ ಮತ್ತು ರೂಪೇಶ್ ರಾಜಣ್ಣ
Published On :

ಬೆಂಗಳೂರು: ಜನರು ಎಲ್ಲಿಯವರೆಗೆ ಇಷ್ಟಪಡ್ತಾರೋ ಅಲ್ಲಿಯವರೆಗೆ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡ್ತೀನಿ ಎಂದು ಹೇಳಿದ್ದ ಕಿಚ್ಚ ಸುದೀಪ್ ಅವರು ಈಗ ಏಕಾಏಕಿ ಮುಂದಿನ ಸೀಸನ್ ನಿರೂಪಣೆ ಮಾಡೋದಿಲ್ಲ ಎಂದು ಟ್ವೀಟ್ ಮಾಡಿದ್ದರು.

ಸುದೀಪ್ ಯಾಕೆ ಈಗ ಈ ನಿರ್ಧಾರ ತೆಗೆದುಕೊಂಡರು ಎಂಬ ಅನುಮಾನ ಶುರುವಾಗಿದೆ. ಈಗ ಬಿಗ್‌ ಬಾಸ್ ಕನ್ನಡ ಸೀಸನ್ 9 ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಈ ಕುರಿತು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಎಂಬ ಕಾರ್ಯಕ್ರಮ ನಡೆಸುವ ಕೆಲವು ಕನ್ನಡ ದ್ರೋಹಿಗಳ, ನಿಮ್ಮ ಕಿತ್ತೋದ್ ಆಟಕ್ಕೆ ಕಿಚ್ಚ ಸುದೀಪ್ ‘ಬಿಗ್ ಬಾಸ್’ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನ ಸಹಿಸೋದಿಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳ್ ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ ಇಲ್ಲ ಬಿಗ್ ಬಾಸ್ ನಿಲ್ಲಬೇಕು, ಅಸಲಿ ವಿಷಯ ನಾಳೆ ಮಾತಾಡ್ತೀನಿ” ಎಂದು ರೂಪೇಶ್ ರಾಜಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

#BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಏನು ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ. ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್‌ಬಾಸ್ ​​ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಲವ್ ಮತ್ತು ಹಗ್‌ ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್‌ ನಲ್ಲಿ ಬರೆದುಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.