Actor Darshan: ಬೆನ್ನುನೋವು ತೀವ್ರ, ನಡೆಯಲೂ ಸಾಧ್ಯವಾಗದೆ ಒದ್ದಾಟ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.

ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಬೆನ್ನು ನೋವು ಇನ್ನಿಲ್ಲದಂತೆ ಕಾಡುತ್ತಿದ್ದು, ನಡೆಯಲೂ ಸಾಧ್ಯವಾಗದೆ ನಟ ಒದ್ದಾಟ ನಡೆಸಿದ್ದಾರೆ ಎನ್ನಲಾಗಿದೆ.
ಹೌದು.. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.
ಈಗಾಗಲೇ ಜೈಲಿನಲ್ಲಿ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಸರ್ಜಿಕಲ್ ಬೆಡ್ ವ್ಯವಸ್ಥೆ ಮಾಡಿದ್ದರೂ ಬೆನ್ನು ನೋವು ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ನಿನ್ನೆ ವಕೀಲ ರಾಮ್ ಸಿಂಗ್, ದರ್ಶನ್ ಭೇಟಿಗಾಗಿ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಸಂದರ್ಶಕರ ಕೊಠಡಿಗೆ ಬರುವಾಗ ಬೆನ್ನನ್ನು ಪದೇ ಪದೇ ಮುಟ್ಟಿಕೊಳ್ಳುತ್ತಾ ನೋವಿನಲ್ಲಿಯೇ ಸಂದರ್ಶಕರ ಕೊಠಡಿಗೆ ದರ್ಶನ್ ತೆರಳಿದ ವಿಡಿಯೋ ವೈರಲ್ ಆಗುತ್ತಿದೆ.
ಹೆಚ್ಚು ಸಮಯ ನಿಲ್ಲಲು ಸಹ ಆಗದೆ ಗೋಡೆಯ ಆಸರೆ ಪಡೆದು ಹೈಸೆಕ್ಯುರಿಟಿ ಸೆಲ್ ಮುಂದೆ ದರ್ಶನ್ ನಿಂತಿದ್ದರು. ದರ್ಶನ್ಗೆ ಜೈಲಿನಲ್ಲಿ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ದರ್ಶನ್ ಗೆ ಬೆನ್ನು ನೋವು ನಿಯಂತ್ರಣಕ್ಕೆ ಬಂದಿಲ್ಲ ಎನ್ನಲಾಗಿದೆ. ದರ್ಶನ್ರ ಬೆನ್ನಿನ ಎಲ್1 ಹಾಗೂ ಎಲ್5 ಭಾಗದಲ್ಲಿ ತೀವ್ರವಾಗಿ ನೋವಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿಗೆ ರವಾನಿಸಿ ಎಂದ ದರ್ಶನ್
ಇನ್ನು ಬೆನ್ನು ನೋವಿಗೆ ಶೀಘ್ರ ಚಿಕಿತ್ಸೆಯ ಅಗತ್ಯ ಇದ್ದು, ದರ್ಶನ್, ತಮ್ಮನ್ನು ಬೆಂಗಳೂರಿಗೆ ಕಳಿಸುವಂತೆ, ಅಲ್ಲಿ ತಮ್ಮ ವೈದ್ಯರ ಬಳಿ ತಾನು ಚಿಕಿತ್ಸೆ ಪಡೆದುಕೊಳ್ಳುವುದಾಗಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಆದರೆ ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



