ಸುದೀಪ್ ಶಿಷ್ಯನ ಹೊಸ ಸಾಹಸ 'ಟಾಮಿ': ನಿರ್ದೇಶನದ ಜೊತೆಗೆ ನಟನೆಗಿಳಿದ 'ಆಶು'!
ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.

‘ಟಾಮಿ’ ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ನಾಯಕ ಆಶು ಅವರಿಗೆ ‘ಟಾಮಿ’ ಮೊದಲ ಸಿನಿಮಾ. ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುವ ಜೊತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ಸಹಜವಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿದೆ. ಆದರೆ ಅವರಿಗೆ ಚಿತ್ರರಂಗವೇನು ಹೊಸದೇನಲ್ಲ.
ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.
ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ ಆರ್ ಎಕ್ಸ್ ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜೊತೆಗೆ ಆರ್ ಎಕ್ಸ್ ಬೈಕ್ ನ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ನಾಯಕನ ರಗಡ್ ಲುಕ್ ನೋಡಿದರೆ ಇದು ಆಕ್ಷನ್ ಸಿನಿಮಾ ಇರಬಹುದೆಂಬ ಅನುಮಾನವೂ ಕಾಣುತ್ತಿದೆ. ‘ಟಾಮಿ’ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ ‘ಟಾಮಿ’ ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



