ಯತಿರಾಜ್ ನಿರ್ದೇಶನದ 'ಸಂಜು' ಸಿನಿಮಾದ ಟ್ರೇಲರ್ ರಿಲೀಸ್
“ಸಂಜು ಚಿತ್ರಕ್ಕೆ ‘ಅಗಮ್ಯ ಪಯಣಿಗ’ ಎಂಬ ಅಡಿ ಬರಹವಿದೆ. ಬಸ್ ನಿಲ್ದಾಣದಲ್ಲಿ ನಡೆಯುವ ಕಥೆ ಇದು.

ನಿರ್ದೇಶಕರಾಗಿ ಬದಲಾಗಿರುವ ಪತ್ರಕರ್ತ ಯತಿರಾಜ್ ನಿರ್ದೇಶನದ ಆರನೇ ಚಿತ್ರ 'ಸಂಜು' ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.
ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಮತ್ತು ಸಾ.ರಾ.ಗೋವಿಂದು, ನಿರ್ಮಾಪಕ ಕೆ.ಮಂಜು, ನಿರ್ದೇಶಕ ಎಂ.ಡಿ.ಕೌಶಿಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ, ತಂಡಕ್ಕೆ ಶುಭ ಹಾರೈಸಿದ್ದಾರೆ.
ಯತಿರಾಜ್ ಅವರು ಚಿತ್ರದ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದು, “ಸಂಜು ಚಿತ್ರಕ್ಕೆ, ‘ಅಗಮ್ಯ ಪಯಣಿಗ’ ಎಂಬ ಅಡಿ ಬರಹವಿದೆ. ಬಸ್ ನಿಲ್ದಾಣದಲ್ಲಿ ನಡೆಯುವ ಕಥೆ ಇದು. ಇಲ್ಲಿ ನಾಯಕ ಸಾಮಾನ್ಯ ಜನರ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುತ್ತಾನೆ. ಆತನ ಬದುಕಿನಲ್ಲೂ ಸಾಕಷ್ಟು ಏರಿಳಿತಗಳಿರುತ್ತವೆ. ನಾಯಕಿ ಸರಸ್ವತಿ ಬದುಕು ಕೂಡ ಇದಕ್ಕೆ ಹೊರತಾಗಿಲ್ಲ. ಮಡಿಕೇರಿಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ. ನಮ್ಮ ಚಿತ್ರ ಪ್ರೇಕ್ಷಕನಿಗೆ ಮೋಸ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಯಕನ ಪಾತ್ರದಲ್ಲಿ ನಟಿಸಿರುವ ಮಾನ್ವಿತ್ ಮಾತನಾಡಿ, "ರೈತರ ಮಗನಾಗಿ, ನನಗೆ ಈ ಅವಕಾಶವನ್ನು ನೀಡಿದ ನಿರ್ದೇಶಕ ಮತ್ತು ನಿರ್ಮಾಪಕರಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು.
ಹಿರಿಯ ನಟಿ ರೇಖಾ ದಾಸ್ ಅವರ ಪುತ್ರಿ ಶ್ರಾವ್ಯ ರಾವ್ ಅವರು ಮಾನ್ವಿತ್ ಜೊತೆ ನಾಯಕಿಯಾಗಿ ನಟಿಸಿದ್ದಾರೆ.
ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸಂಜು ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



