ಡ್ಯಾನ್ಸ್ ನಲ್ಲಿ ಹೊಸ ಟ್ರೆಂಡ್: ಗಿನ್ನಿಸ್ ದಾಖಲೆ ಬರೆದ ಮೆಗಾಸ್ಟಾರ್ ಚಿರಂಜೀವಿ!
ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿದರು.

ಹೈದರಾಬಾದ್: ತೆಲುಗು ಚಿತ್ರಗಳಲ್ಲಿ ತಮ್ಮ ವಿಭಿನ್ನ ನೃತ್ಯಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈಗಲೂ ಸೆಳೆಯುತ್ತಿರುವ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಗಿನ್ನಿಸ್ ವಿಶ್ವ ದಾಖಲೆಯ ಗೌರವ ದೊರಕಿದೆ. ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾಗಿದ್ದಾರೆ.
ಈ ಸಂಬಂಧ ಹೈದರಾಬಾದ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಗಿನ್ನಿಸ್ ವಿಶ್ವ ದಾಖಲೆಯ ಪ್ರತಿನಿಧಿಗಳು ಚಿರಂಜೀವಿಗೆ ಅವರಿಗೆ ಪ್ರಮಾಣ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿರಂಜೀವಿ, ಈ ಕ್ಷಣ ಅವಿಸ್ಮರಣೀಯವಾಗಿದೆ. ನಾನು ಮಾಡಿದ ನೃತ್ಯಗಳಿಂದಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಸೇರುತ್ತೇನೆಂದು ಎಂದಿಗೂ ಊಹಿಸಿರಲಿಲ್ಲ. ಇದು ನಿಜವಾಗಿಯೂ ನನ್ನನ್ನು ನಟನಾಗಿ ಮಾಡಿದೆ. ನೃತ್ಯವು ನನ್ನ ವೃತ್ತಿ ಜೀವನದುದ್ದಕ್ಕೂ ಉತ್ತಮ ಪ್ರಶಂಸೆ ತಂದುಕೊಟ್ಟಿದೆ. ನನ್ನನ್ನು ನಟನಾಗಿ ಮಾಡುವಲ್ಲಿ ನಿರ್ದೇಶಕರು, ನಿರ್ಮಾಪಕರು, ನೃತ್ಯ ಸಂಯೋಜಕರ ಕೊಡುಗೆ ಅಪಾರವಾಗಿದೆ. ಅವರಿಗೆ ಸದಾ ಚಿರಋಣಿಯಾಗಿರುತ್ತೇನೆ ಎಂದರು.
ಚಿರಂಜೀವಿ ಅವರು 45 ವರ್ಷಗಳ ಸಿನಿ ಪಯಣದಲ್ಲಿ 156 ಚಿತ್ರಗಳಲ್ಲಿ ಅಭಿನಯಿಸಿದ್ದು, 537 ಹಾಡುಗಳಲ್ಲಿ 24,000 ಡ್ಯಾನ್ಸ್ ಸ್ಟೆಪ್ಟ್ ಹಾಕಿದ್ದಾರೆ. ಗಿನ್ನಿಸ್ ವಿಶ್ವ ದಾಖಲೆಗೆ ಸೇರ್ಪಡೆಯಾದ ಚಿರಂಜೀವಿ ಅವರಿಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮತ್ತಿತರ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



